ಕೂಡಿಗೆ, ಜ. ೧೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನ ಸಮೀಪ ಕಾರಿನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಖಚಿತವಾದ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು ಕಾರು ಸೇರಿದಂತೆ ಬಸವರಾಜ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ ಆದೇಶದಂತೆ ಕುಶಾಲನಗರದ ಡಿವೈಎಸ್‌ಪಿ ಶೈಲೇಂದ್ರ ಸೂಚನೆಯಂತೆ ಕುಶಾಲನಗರ ವೃತ್ತ ಅಧಿಕಾರಿ ಮಹೇಶ್ ಮಾರ್ಗದರ್ಶನದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ತಂಡ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿ ಪ್ರಕರಣ ದಾಖಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಮಂಜುನಾಥ, ಶ್ರೀನಿವಾಸ, ಶನತ್, ಚಾಲಕ ಯೋಗೇಶ್ ಇದ್ದರು.