ಸುಂಟಿಕೊಪ್ಪ, ಜ. ೧೬: ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿಸುವAತೆ ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸಮಾರಂಭಕ್ಕೆ ಆಗಮಿಸಿದ್ದ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಜನ್ನುಸುದ್ದಿನ್ ಮನವಿ ಪತ್ರ ಸಲ್ಲಿಸಿದ್ದರು.
ಮನವಿ ಸ್ವೀಕರಿಸಿದ ಸಚಿವರು, ಆರೋಗ್ಯ ಸಚಿವರನ್ನು ಭೇಟಿ ಮಾಡಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆಯಿತ್ತರು. ಈ ಸಂದರ್ಭ ಯುವ ಜೆಡಿಎಸ್ ಮುಖಂಡ ಮುದಶಿರ್ ಹಾಗೂ ತಂಜೀರ್ ಸೇರಿದಂತೆ ಹಲವರು ಹಾಜರಿದ್ದರು.