ಸೋಮವಾರಪೇಟೆ, ಜ. ೧೬: ತಾಲೂಕಿನ ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ ಇತಿಹಾಸ ಪ್ರಸಿದ್ಧ ಶ್ರೀಕುಮಾರಲಿಂಗೇಶ್ವರ ದೇವರ ೬೩ನೇ ವಾರ್ಷಿಕ ಮಹಾರಥೋತ್ಸವ ಭಕ್ತಾದಿಗಳ ಸಮ್ಮುಖದಲ್ಲಿ, ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ಸಾಂಪ್ರದಾಯಿಕವಾಗಿ ನೆರವೇರಿತು.

ಪುಷ್ಪಗಿರಿ ಬೆಟ್ಟತಪ್ಪಲಿನ ಶಾಂತಳ್ಳಿಯಲ್ಲಿ ಸುಮಾರು ೮೦೦ಕ್ಕೂ ಅಧಿಕ ವರ್ಷಗಳ ಹಿಂದಿನ ಇತಿಹಾಸ ಹೊಂದಿರುವ ಶ್ರೀಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ೬೩ನೇ ವರ್ಷದ ಮಹಾ ರಥೋತ್ಸವ ಭಕ್ತಾದಿಗಳ ಭಕ್ತಿಪರಾಕಾಷ್ಠೆಯ ನಡುವೆ ಸಂಪನ್ನಗೊAಡಿತು.

ಕೋವಿಡ್ ಹಿನ್ನೆಲೆ ಅದ್ಧೂರಿ ಆಚರಣೆ, ಜಾತ್ರಾ ಮಹೋತ್ಸವಕ್ಕೆ ತಡೆಯೊಡ್ಡಲಾಗಿದ್ದು, ಸ್ಥಳೀಯ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತಾದಿಗಳು ರಥೋತ್ಸವದಲ್ಲಿ ಭಾಗಿಯಾಗಿದ್ದರು. ನಾದಸ್ವರದೊಂದಿಗೆ ದೇವಾಲಯದಿಂದ ಮಹಾದ್ವಾರ ದವರೆಗೆ ಅಲಂಕೃತ ರಥದಲ್ಲಿ ಶ್ರೀ ಕುಮಾರಲಿಂಗೇಶ್ವರ ದೇವರ ಮೆರವಣಿಗೆ

(ಮೊದಲ ಪುಟದಿಂದ) ನಡೆಸಲಾಯಿತು. ನೂರಾರು ಮಂದಿ ಭಕ್ತಾದಿಗಳು ರಥವನ್ನೆಳೆದರು.

ಕಳೆದ ತಾ.೧೩ರ ಬೆಳ್ಳಿ ಬಂಗಾರ ದಿನದಂದು ಪ್ರಾರ್ಥನಾ ಪೂಜೆ ಯೊಂದಿಗೆ ವಿಧ್ಯುಕ್ತ ಚಾಲನೆ ಕಂಡಿ ರುವ ಪ್ರಸಕ್ತ ವರ್ಷದ ಪೂಜೋತ್ಸವ ದಲ್ಲಿ ಪ್ರತಿದಿನ ವಿಶೇಷ ಪೂಜಾ ಕಾರ್ಯಗಳು ನಡೆಯುತ್ತಿವೆ. ಜಾತ್ರೆ ಪ್ರಯುಕ್ತ ದೇವಾಲಯದಲ್ಲಿ ಕರುವಿನ ಹಬ್ಬ, ಗರುಡಗಂಬದಲ್ಲಿ ತುಪ್ಪದ ನಂದಾದೀಪ ಬೆಳಗುವದು, ಪುಷ್ಪಗಿರಿ ಬೆಟ್ಟದಲ್ಲಿರುವ ಪುರಾತನ ದೇವಾಲಯ ದಲ್ಲಿ ದೀಪೋತ್ಸವ, ಅರಸುಬಲ ಸೇವೆ ಸೇರಿದಂತೆ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದ್ದು, ಮಹಾರಥೋತ್ಸವವು ಅನೂಚಾನ ಆಚರಣೆಗಳೊಂದಿಗೆ ಶ್ರದ್ಧಾಭಕ್ತಿಯಲ್ಲಿ ಜರುಗಿತು.

ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ಪೌರೋಹಿತ್ವದಲ್ಲಿ ಬೆಳಗ್ಗಿನಿಂದಲೇ ಪೂಜಾ ವಿಧಿ ವಿಧಾನಗಳು ನಡೆದವು. ಅನಾದಿಕಾಲದಿಂದಲೂ ನಡೆದು ಬಂದ ಪದ್ದತಿಯ ಮೇರೆ ಕೂತಿ ನಾಡು, ತೋಳುನಾಡು, ಪುಷ್ಪಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಹಾಗೂ ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ರಥೋತ್ಸವ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ. ಲೋಕೇಶ್, ಉಪಾಧ್ಯಕ್ಷ ಜಿ.ಡಿ. ಬಸವರಾಜು, ಪ್ರಧಾನ ಕಾರ್ಯದರ್ಶಿ ಕೆ.ಕೆ. ಮುತ್ತಣ್ಣ, ಖಜಾಂಚಿ ಎಸ್.ಆರ್. ಉತ್ತಯ್ಯ, ಸಹ ಕಾರ್ಯದರ್ಶಿ ಎಸ್.ಹೆಚ್. ಗಿರೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಪ್ರಮುಖರಾದ ಗಿರೀಶ್ ಮಲ್ಲಪ್ಪ, ಅರುಣ್ ಕೊತ್ನಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಂಜೆ ದೇವಾಲಯ ದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.

ತಾ.೧೭ರಂದು (ಇಂದು) ಮಹಾ ಸಂಪ್ರೋಕ್ಷಣೆ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ನಾರಿಕೇಳ ಜಲಾಭಿಷೇಕ, ಮಹಾಮಂಗಳಾರತಿ ನಂತರ ಮಂಗಳ ಪ್ರಾರ್ಥನೆ ನಡೆಯುವ ಮೂಲಕ ಪ್ರಸಕ್ತ ವರ್ಷದ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ತೆರೆಬೀಳಲಿದೆ ಎಂದು ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ. ಲೋಕೇಶ್ ತಿಳಿಸಿದ್ದಾರೆ.