ಮಡಿಕೇರಿ, ಜ. ೧೭: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿರುವ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಜೆಡಿಎಸ್ ಆಗ್ರಹಿಸಿದೆ.

ನೆಲ್ಯಹುದಿಕೇರಿ ಸಮೀಪದ ಅರೆಕಾಡಿನಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಆಶಿಕ್ ಮನೆಗೆ ಭೇಟಿ ನೀಡಿ ಜೆಡಿಎಸ್ ಪ್ರಮುಖರು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್, ಕಾಡಾನೆ ದಾಳಿ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಈ ಸಂಬAಧ ಸರಕಾರ ಮೌನ ವಹಿಸಿದೆ. ಪರಿಣಾಮ ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಮೃತನ ಕುಟುಂಬಕ್ಕೆ ರೂ.೨೫ ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಖ್ ಖಾನ್, ಮಡಿಕೇರಿ ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಖಲೀದ್ ಬಾದ್‌ಷ, ಜಿಲ್ಲಾ ಉಪಾಧ್ಯಕ್ಷ ಶಿವದಾಸ್, ಸೇರಿದಂತೆ ಮತ್ತಿತರರು ಹಾಜರಿದ್ದರು.