ಶನಿವಾರಸಂತೆ, ಜ. ೧೭: ಪಟ್ಟಣದ ೬೬/೧೧ ಕೆವಿ ವಿದ್ಯುತ್ ಉಪಕೇಂದ್ರ ವಿತರಣಾ ಕೇಂದ್ರದಲ್ಲಿ ತುರ್ತು ಕೆಲಸವಿರುವುದರಿಂದ ತಾ. ೧೮ ರಂದು (ಇಂದು) ಬೆಳಿಗ್ಗೆ ೯ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಾಲಪುರ, ಗೌಡಳ್ಳಿ, ನಿಡ್ತ, ಅಂಕನಹಳ್ಳಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಶನಿವಾರಸಂತೆ ಸೆಸ್ಕ್ ಶಾಖಾ ಕಚೇರಿ ಕಿರಿಯ ಇಂಜಿನಿಯರ್ ಹೇಮಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.