ವೀರಾಜಪೇಟೆ, ಜ. ೧೩: ಅಸಂಘಟಿತ ಕಾರ್ಮಿಕರು ಸಂಘಟನೆಯ ಮೂಲಕ ಸದಸ್ಯತ್ವ ಪಡೆದುಕೊಂಡು ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಮಡಿಕೇರಿಯ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA.ಯತ್ನಟ್ಟಿ ಹೇಳಿದರು.
ವೀರಾಜಪೇಟೆ ಗಣಪತಿ ದೇವಸ್ಥಾನದ ಬಳಿಯಿರುವ ಓಂ ಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘಟನೆ ಕೊಡಗು ಜಿಲ್ಲಾ ಸದಸ್ಯರಿಗೆ ಇ-ಶ್ರಮ್ ಯೋಜನೆಯ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯತ್ನಟ್ಟಿ ಅವರು ಮಾತನಾಡಿ, ಕಟ್ಟಡ ವೀರಾಜಪೇಟೆ, ಜ. ೧೩: ಅಸಂಘಟಿತ ಕಾರ್ಮಿಕರು ಸಂಘಟನೆಯ ಮೂಲಕ ಸದಸ್ಯತ್ವ ಪಡೆದುಕೊಂಡು ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಮಡಿಕೇರಿಯ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎA.ಯತ್ನಟ್ಟಿ ಹೇಳಿದರು.
ವೀರಾಜಪೇಟೆ ಗಣಪತಿ ದೇವಸ್ಥಾನದ ಬಳಿಯಿರುವ ಓಂ ಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘಟನೆ ಕೊಡಗು ಜಿಲ್ಲಾ ಸದಸ್ಯರಿಗೆ ಇ-ಶ್ರಮ್ ಯೋಜನೆಯ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯತ್ನಟ್ಟಿ ಅವರು ಮಾತನಾಡಿ, ಕಟ್ಟಡ ಶ್ರಮ್ ಯೋಜನೆಗೆ ೧೬ ರಿಂದ ೫೯ ವರ್ಷದೊಳಗಿನ ಬಡ ಕೂಲಿ ಕೆಲಸ ಮಾಡುವಂತ ಜಿಲ್ಲೆಯ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರು ನೋಂದಾಯಿಸಿ ಕೊಳ್ಳಬೇಕು. ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ವರ್ಗಗಳ ಎಲ್ಲಾ ಕಾರ್ಮಿಕರುಗಳು ಗುರುತಿನ ಚೀಟಿ ಪಡೆದುಕೊಳ್ಳುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಕಾರ್ಮಿಕರಿಗೆ ದೊರಕುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಹೇಳಿದರು. ಕಾರ್ಯಕ್ರಮದಲ್ಲಿ ೭೫ ಕ್ಕೂ ಹೆಚ್ಚು ಕಾರ್ಮಿಕರಿಗೆ ಇ-ಶ್ರಮ್ ಯೋಜನೆಯ ಗುರುತಿನ ಚೀಟಿ ವಿತರಿಸಲಾಯಿತು.
ಈ ಸಂದರ್ಭ ವೀರಾಜಪೇಟೆ ಕಾರ್ಮಿಕ ಇಲಾಖೆಯ ಸಹಾಯಕ ಎಸ್. ನವೀನ್, ಓಂ ಶಕ್ತಿ ಜಿಲ್ಲಾ ಸಂಘಟನೆಯ ಉಪಾಧ್ಯಕ್ಷೆ ಸರೋಜ, ಕಾರ್ಯದರ್ಶಿ ಪೆರಿಯಸ್ವಾಮಿ, ಸಹ ಕಾರ್ಯದರ್ಶಿ ಬೀರೆಗೌಡ, ಹಾಗೂ ಸಮಿತಿಯ ಸದಸ್ಯರುಗಳು ಹಾಜರಿದ್ದರು.