ಕೋವಿಡ್ ೧೯ ಕುರಿತು ಪರಿಶೀಲನಾ ಸಭೆ
ಬೆಂಗಳೂರು, ಜ. ೧೭: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ೧೯ ಕುರಿತ ಪರಿಶೀಲನಾ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿವೆ. ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಹಾಗೂ ಹೆಚ್ಚು ಸಿಬ್ಬಂದಿ ನಿಯೋಜಿಸಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಜನ ಟ್ರಯಾಜಿಂಗ್‌ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ ನೀಡಿದರು. ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು, ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು. ಅಂತೆಯೆ ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಔಷಧಿ ಕಿಟ್‌ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ನಿರ್ದೇಶಿಸಿದರು. ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆಯಲು ಸಲಹೆ ನೀಡಿದರು. ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೆಕು. ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು. ಆಕ್ಸಿಜನ್ ಪ್ಲಾಂಟ್‌ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ. ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು, ಮಕ್ಕಳು ಮತ್ತು ೬೦ ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು, ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಗಳಾದವು.
ಅಬುಧಾಬಿಯಲ್ಲಿ ಸ್ಫೋಟ - ಇಬ್ಬರು ಭಾರತೀಯರ ಸಾವು
ದುಬೈ, ಜ. ೧೭: ಅಬುಧಾಬಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಮೂರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಡ್ರೋನ್ ದಾಳಿಯಿಂದ ಈ ಸ್ಫೋಟ ಸಂಭವಿಸಿರಬಹುದೆAದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ಮೂವರು ಭಾರತೀಯರು, ಓರ್ವ ಪಾಕಿಸ್ತಾನ ಪ್ರಜೆ ಸಾವನ್ನಪ್ಪಿದ್ದು, ಗಾಯಾಳುಗಳ ಗುರುತು ಪತ್ತೆಯಾಗಿಲ್ಲ, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂಭವನೀಯ ದಾಳಿಗೆ ಅಬುಧಾಬಿ ಪೊಲೀಸರು ತಕ್ಷಣವೇ ಯಾವುದೇ ಶಂಕೆಯನ್ನು ವ್ಯಕ್ತಪಡಿಸದಿದ್ದರೂ ಯೆಮೆನ್‌ನ ಹೌತಿ ಬಂಡುಕೋರರು ಯುನೈಟೆಡ್ ಅರಬ್ ಎಮಿರೇಟ್ಸ್ ಅನ್ನು ಗುರಿಯಾಗಿಸಿಕೊಂಡು ದಾಳಿಯ ಹೊಣೆ ಹೊತ್ತಿಕೊಂಡಿದ್ದಾರೆ. ಇರಾನ್ ಬೆಂಬಲಿತ ಹೌತಿಗಳು ಹಲವಾರು ದಾಳಿಗಳನ್ನು ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ ಆದರೆ, ಅವುಗಳು ನಡೆದಿಲ್ಲ ಎಂದು ನಂತರ ಎಮಿರೇಟ್ಸ್ ಅಧಿಕಾರಿಗಳು ನಿರಾಕರಿಸಿದ್ದಾರೆ. ಡ್ರೋನ್‌ಗಳಿಗೆ ಸೇರಿದ ಸಣ್ಣ ಹಾರಾಟದ ವಸ್ತು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಅದು ಎರಡು ಪ್ರದೇಶದಲ್ಲಿ ಬಿದಿದ್ದು, ಸ್ಫೋಟ ಮತ್ತು ಬೆಂಕಿಗೆ ಕಾರಣವಾಗಿರಬಹುದೆಂದು ಈ ಘಟನೆಯಿಂದ ಯಾವುದೇ ಗಮನಾರ್ಹ ರೀತಿಯ ಹಾನಿಯಾಗಿಲ್ಲ ಎಂದು ಅಬು ಧಾಬಿ ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಲಿದೆ
ಬೆಂಗಳೂರು, ಜ. ೧೭: ರಾಜ್ಯದಲ್ಲಿ ಜನವರಿ ೨೫ರ ವೇಳೆಗೆ ಕೊರೊನಾ ವೈರಸ್ ಸೋಂಕು ಹೆಚ್ಚಾಗಲಿದ್ದು, ನಂತರ ಹಂತ ಹಂತವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಕೋವಿಡ್-೧೯ ತಜ್ಞರು ತಿಳಿಸಿರುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಅವರು ಸೋಮವಾರ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, ರಾಜ್ಯದಲ್ಲಿ ಜನವರಿ ೨೫ ರಂದು ಕೋವಿಡ್ ಪ್ರಕರಣಗಳು ಗರಿಷ್ಠ ಮಟ್ಟವನ್ನು ತಲುಪಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ, ನಂತರ ಅದು ಕ್ರಮೇಣ ಕಡಿಮೆಯಾಗುತ್ತದೆ. ರಾಜ್ಯದಲ್ಲಿ ದಿನಕ್ಕೆ ಎರಡು ಲಕ್ಷಕ್ಕಿಂತ ಹೆಚ್ಚು ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನು ೧.೫ ಲಕ್ಷಕ್ಕೆ ಇಳಿಸಬೇಕು. ಪರೀಕ್ಷೆಯನ್ನು ಹೆಚ್ಚಳ ಮಾಡುವುದರಿಂದ ಏನೂ ಪ್ರಯೋಜನವಿಲ್ಲವೆಂದು ತಜ್ಞರು ಹೇಳಿದ್ದಾರೆ. ಲಸಿಕೆ ಪ್ರಮಾಣ ಕಡಿಮೆ ಇರುವ ಐದಾರು ಜಿಲ್ಲೆಗಳಲ್ಲಿ ಲಸಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ವಾರಾಂತ್ಯದ ಕರ್ಫ್ಯೂ ವಿಸ್ತರಿಸುವ ಬಗ್ಗೆ ಶುಕ್ರವಾರ ನಡೆಯುವ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು. ಆದಾಗ್ಯೂ, ರಾಜ್ಯದಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಸಾಧ್ಯತೆಯನ್ನು ಅವರು ಸ್ಪಷ್ಟವಾಗಿ ತಳ್ಳಿಹಾಕಿದರು.
ಪತ್ತೆಯಾದ ಐ.ಇ.ಡಿ.ಯಲ್ಲಿ ನೈಟ್ರೇಟ್, ಆರ್‌ಡಿಎಕ್ಸ್ ಅಂಶ
ನವದೆಹಲಿ, ಜ. ೧೭: ಇತ್ತೀಚೆಗಷ್ಟೇ ಘಾಜಿಪುರ ಹೂವಿನ ಮಾರುಕಟ್ಟೆಯಿಂದ ಪತ್ತೆಯಾದ ಐಇಡಿಯಲ್ಲಿ ಟೈಮರ್ ಸಾಧನವನ್ನು ಅಳವಡಿಸಲಾಗಿದ್ದು, ಅಮೋನಿಯಂ ನೈಟ್ರೇಟ್ ಮತ್ತು ಆರ್‌ಡಿಎಕ್ಸ್ ಅಂಶಗಳಿದ್ದವು ಎಂದು ಎನ್‌ಎಸ್‌ಜಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜನವರಿ ೧೪ರಂದು ಇಲ್ಲಿ ವಶಪಡಿಸಿಕೊಂಡ ಸುಧಾರಿತ ಸ್ಫೋಟಕ ಸಾಧನವನ್ನು ನಿಷ್ಕ್ರಿಯಗೊಳಿಸಲು ಫೆಡರಲ್ ಭಯೋತ್ಪಾದನಾ ನಿಗ್ರಹ ಕಮಾಂಡೋ ಪಡೆ ತನ್ನ ಹರಿಯಾಣದ ರಾಷ್ಟಿçÃಯ ಬಾಂಬ್ ಡೇಟಾ ಸೆಂಟರ್ ತಜ್ಞರನ್ನು ಕಳುಹಿಸಿತ್ತು. ಎನ್‌ಎಸ್‌ಜಿ ಸ್ಫೋಟದ ನಂತರದ ಅಂತಿಮ ತನಿಖಾ ವರದಿಯನ್ನು ದೆಹಲಿ ಪೊಲೀಸರಿಗೆ ಸಲ್ಲಿಸಿದ್ದು ಐಇಡಿಯಲ್ಲಿ ಅಮೋನಿಯಂ ನೈಟ್ರೇಟ್, ಆರ್‌ಡಿಎಕ್ಸ್, ೯-ವೋಲ್ಟ್ ಬ್ಯಾಟರಿ, ಸ್ಫೋಟದ ಸಮಯದಲ್ಲಿ ಚೂರುಗಳಾಗಿ ಕಾರ್ಯನಿರ್ವಹಿಸಬಲ್ಲ ಕಬ್ಬಿಣದ ತುಂಡುಗಳು ಮತ್ತು ಟೈಮರ್ ಸಾಧನವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆರ್‌ಡಿಎಕ್ಸ್ ಅನ್ನು ಐಇಡಿಯಲ್ಲಿ ಕೋರ್ ಸ್ಫೋಟಕವಾಗಿ ಬಳಸಲಾಗಿದೆ. ಆದರೆ ಸರ್ಕ್ಯೂಟ್‌ನಲ್ಲಿನ "ಗ್ಲಿಚ್" ನಿಂದ ಅದು ಸ್ಫೋಟಗೊಂಡಿಲ್ಲ ಎಂದು ತನಿಖಾ ವರದಿಯನ್ನು ಉಲ್ಲೇಖಿಸಿ ಎನ್‌ಎಸ್‌ಜಿ ಹೇಳಿದೆ. ಕಬ್ಬಿಣದ ಪೆಟ್ಟಿಗೆಯೊಳಗೆ ಇರಿಸಲಾಗಿದ್ದ ಸುಮಾರು ೩ ಕೆಜಿ ಐಇಡಿಯನ್ನು ಪಡೆ ನಿಷ್ಕಿçಯಗೊಳಿಸಿದೆ. ಈ ಘಟನೆಯನ್ನು ದೆಹಲಿ ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳು ಗಂಭೀರವಾಗಿ ಪರಿಗಣಿಸಿವೆ. ಕಾರಣ ಇದು ಜನವರಿ ೨೬ರ ಗಣರಾಜ್ಯೋತ್ಸವ ಆಚರಣೆಗೆ ಕೆಲವೇ ದಿನಗಳ ಮೊದಲು ಸಿಕ್ಕಿದ್ದು, ಇದಕ್ಕಾಗಿ ರಾಷ್ಟç ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುತ್ತದೆ.
ದೆಹಲಿಯಲ್ಲಿ ಸೇನಾ ಪಡೆಗಳ ಭರ್ಜರಿ ತಾಲೀಮು
ನವದೆಹಲಿ, ಜ. ೧೭: ಮಹಾಮಾರಿ ಕೊರೊನಾ ವೈರಸ್ ನಡುವೆಯೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ರಾಷ್ಟç ರಾಜಧಾನಿಯಲ್ಲಿ ದೆಹಲಿಯಲ್ಲಿ ಈಗಾಗಲೇ ಸೇನಾ ಪಡೆಗಳು ಭರ್ಜರಿ ತಾಲೀಮು ನಡೆಸುತ್ತಿವೆ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಕಳೆದ ವರ್ಷ ಭಾರತೀಯ ವಾಯಪಡೆಗೆ ಸೇರ್ಪಡೆಗೊಂಡಿರುವ ಅತ್ಯಾಧುನಿಕ ಐದು ರಫೇಲ್ ಯುದ್ಧ ವಿಮಾನಗಳು ಸೇರಿದಂತೆ ಒಟ್ಟು ೭೫ ಯುದ್ಧ ವಿಮಾನಗಳು ತಮ್ಮ ಶಕ್ತಿ ಪ್ರದರ್ಶಿಸಲಿವೆ. ಈ ವರ್ಷದ ಗಣ ರಾಜ್ಯೋತ್ಸವ ಮೊದಲಿಗಿಂತ ಹೆಚ್ಚು ರೋಚಕವಾಗಿರಲಿದೆ. ಜನವರಿ ೨೬ ರಂದು “ಆಜಾದಿ ಕಾ ಅಮೃತ್ ಮಹೋತ್ಸವ”ದ ಅಂಗವಾಗಿ ೭೫ ಯುದ್ಧ ವಿಮಾನಗಳು ಹಾರಾಟ ನಡೆಸಲಿವೆ. ಇದು ರಾಜ್‌ಪಥ್‌ನಲ್ಲಿ ನಡೆದ ಅತಿ ದೊಡ್ಡ ಫ್ಲೈ ಪಾಸ್ಟ್ ಆಗಲಿದೆ ಎಂದು ವಾಯುಪಡೆಯ ಪ್ರೊ ವಿಂಗ್ ಕಮಾಂಡರ್ ಇಂದ್ರನೀಲ್ ನಂದಿ ಅವರು ಸೋಮವಾರ ತಿಳಿಸಿದ್ದಾರೆ. ಐದು ರಫೇಲ್ ಯುದ್ಧ ವಿಮಾನಗಳು ಸಾಹಸ ಪ್ರದರ್ಶಿಸುವುದರೊಂದಿಗೆ ತಮ್ಮ ಶಕ್ತಿಯನ್ನು ಪ್ರದರ್ಶಿಸಲಿವೆ. ಮೊದಲ ಬಾರಿಗೆ ನೌಕಾಪಡೆಯ ಒiಉ೨೯ಏ ಮತ್ತು P೮I ಯುದ್ಧ ವಿಮಾನಗಳು ಸಹ ಭಾಗವಹಿಸುತ್ತಿವೆ ಎಂದಿದ್ದಾರೆ.