ಸೋಮವಾರಪೇಟೆ, ಜ. ೧೭: ಮಳೆಹಾನಿ ಪರಿಹಾರ ನಿಧಿಯಡಿ ರೂ. ೧.೩೫ ಕೋಟಿ ವೆಚ್ಚದಲ್ಲಿ ನಿರ್ಮಿಸ ಲಾಗಿರುವ ತಾಲೂಕು ಆಡಳಿತ ಸೌಧದ ಮೇಲಂತಸ್ತು ಕಟ್ಟಡವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು.

ಶಿಥಿಲಾವಸ್ಥೆಗೆ ತಲುಪಿದ್ದ ತಾಲೂಕು ಕಚೇರಿಯನ್ನು ಮಳೆಹಾನಿ ಪರಿಹಾರ ನಿಧಿಯಡಿ ನವೀಕರಣ ಗೊಳಿಸಿದ್ದು, ಕಟ್ಟಡದ ಮೇಲ್ಭಾಗ ಹೊಸದಾಗಿ ಒಂದು ಅಂತಸ್ತು ನಿರ್ಮಿ ಸಲಾಗಿದ್ದು, ಕಟ್ಟಡ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಕಂದಾಯ ಇಲಾಖೆ ಇತರ ಎಲ್ಲಾ ಇಲಾಖೆ ಗಳಿಗೂ ಮಾತೃ ಇಲಾಖೆಯಾಗಿದ್ದು, ಸರ್ಕಾರಿ ನೌಕರರು ತಮ್ಮ ಜವಾಬ್ದಾರಿ ಅರಿತು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದರು.

ನೌಕರರು ಕಾನೂನು ಭಾಗ ದೊಳಗೆ ಜವಾಬ್ದಾರಿ ನಿರ್ವಹಿಸುವ ಮೂಲಕ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಕೆಲಸ ಕಾರ್ಯಗಳಿಗೆ ಸಾರ್ವಜನಿಕರನ್ನು ವಿನಾಕಾರಣ ಅಲೆದಾಡಿಸಬಾರದು. ನಾಳೆ ಮಾಡುವ ಕೆಲಸವನ್ನು ಇಂದೇ ಪೂರ್ಣಗೊಳಿಸುವತ್ತ ಗಮನಹರಿಸ ಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಅಧಿಕಾರಿಗಳು ಸರ್ಕಾರದ ಕೆಲಸ ದೇವರ ಕೆಲಸ ಎಂಬAತೆ ಸೇವೆ ಸಲ್ಲಿಸಬೇಕು. ಕರ್ತವ್ಯದಲ್ಲಿ ಪ್ರಾಮಾಣಿಕರಾಗಿರಬೇಕು. ನೂತನ

(ಮೊದಲ ಪುಟದಿಂದ) ಕಟ್ಟಡವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸರ್ಕಾರಿ ಆಸ್ತಿಪಾಸ್ತಿಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯಾದ್ಯಂತ ಹಲವು ಶಾಲೆ, ಅಂಗನವಾಡಿ ಜಾಗದ ದಾಖಲಾತಿ ಇಂದಿಗೂ ಸಂಬAಧಿಸಿದ ಇಲಾಖೆಗಳ ಸುಪರ್ದಿಗೆ ಬಂದಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮವಹಿಸಬೇಕು ಎಂದ ರಂಜನ್, ಜಿಲ್ಲೆಯಲ್ಲಿ ಸುಸಜ್ಜಿತ ಕ್ರಿಕೆಟ್ ಮೈದಾನ ನಿರ್ಮಾಣಕ್ಕೆ ಎದುರಾಗಿದ್ದ ಅಡೆತಡೆಗಳನ್ನು ನೂತನ ಜಿಲ್ಲಾಧಿಕಾರಿ ಗಳು ನಿವಾರಿಸಿರುವುದು ಶ್ಲಾಘನೀಯ ಎಂದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಜನೋಪಯೋಗಿ ಯೋಜನೆ ಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳ ಪಾತ್ರ ಮಹತ್ತರವಾಗಿದೆ. ನೌಕರರು ಸಕಾಲದಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು ಎಂದರು.

ತಾಲೂಕು ತಹಶೀಲ್ದಾರ್ ಗೋವಿಂದರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪವಿಭಾಗಾಧಿ ಕಾರಿ ಈಶ್ವರ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ತಾ.ಪಂ. ಮಾಜಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಡಿವೈಎಸ್‌ಪಿ ಶೈಲೇಂದ್ರ, ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್ ಅವರುಗಳು ಉಪಸ್ಥಿತರಿದ್ದರು.