ಮಡಿಕೇರಿ, ಜ. ೧೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ‘ಚಂಪಾ ಒಂದು ನೆನಪು’ ಉಪನ್ಯಾಸ ಹಾಗೂ ಸಾಹಿತಿ ಬಿ.ಆರ್. ಜೋಯಪ್ಪ ಅವರ ಕೃತಿ "ಬದುಕು" ಪರಿಸರ ಕಥನ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ತಾ.೨೦ರಂದು ಮಧ್ಯಾಹ್ನ ೨.೩೦ಕ್ಕೆ ಮಡಿಕೇರಿಯ ಪತ್ರಿಕಾ ಭವನದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕಸಾಪ, ಹಾಗೂ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉದ್ಘಾಟಿಸಲಿದ್ದಾರೆ. ಗದಗದ ಕೆ.ವಿ.ಎಸ್.ಆರ್. ಕಾಲೇಜಿನ ಪ್ರಾಚಾರ್ಯರು, ಸಾಹಿತಿ ಮತ್ತು ಚಿಂತಕರೂ ಆದ ಪ್ರೊ.ಸಿದ್ದು ಯಾಪಲಪರವಿ ಅವರು ಪ್ರೋ ಚಂಪಾ ಅವರ ಕುರಿತು ಉಪನ್ಯಾಸ ನೀಡಲಿದ್ದಾರೆ.

ಸಾಹಿತಿ ಬಿ.ಆರ್.ಜೋಯಪ್ಪ ಅವರು ರಚಿಸಿದ "ಬದುಕು" ಪರಿಸರ ಕಥನ ಪುಸ್ತಕವನ್ನು ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜಿನ ಹಿಂದಿ ಭಾಷಾ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀಧರ ಹೆಗಡೆ ಬಿಡುಗಡೆಗೊಳಿಸಲಿದ್ದಾರೆ. ಸಾಹಿತಿ ಬಿ.ಆರ್. ಜೋಯಪ್ಪ ಭಾಗವಹಿಸಲಿದ್ದಾರೆ. ಕೊಡಗಿನ ಯುವ ಗಾಯಕರಿಂದ. ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.