ಮಡಿಕೇರಿ, ಜ. ೧೭: ತುಳು-ಕೊಡವ ಭಾಷೆಗಳ ಅಳಿವು ಉಳಿವು (ಬಿ.ಕೆ ಹರಿಪ್ರಸಾದ್ ಅವರ ಸಂಸತ್ ಭಾಷಣಗಳು ಭಾಗ-೧) ಪುಸ್ತಕದ ಬಿಡುಗಡೆ ಸಮಾರಂಭ ತಾ.೨೦ ರಂದು ಬೆಳಿಗ್ಗೆ ೧೦:೩೦ಕ್ಕೆ ಮಡಿಕೇರಿಯ ಮಯೂರ ವ್ಯಾಲಿ ವ್ಯೂ ಹೊಟೇಲಿನ ಸಭಾಂಗಣದಲ್ಲಿ ನಡೆಯಲಿದೆ.

ನ್ಯಾಯವಾದಿ ಹಾಗೂ ಸಾಹಿತಿ ಕೆ.ಪಿ ಬಾಲಸುಬ್ರಹ್ಮಣ್ಯ ಅವರು ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ರಾಜ್ಯಸಭಾ ಸಂಸದ ಬಿ.ಕೆ ಹರಿಪ್ರಸಾದ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕಾಳಪ್ಪ ಭಾಗವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಆರ್. ಜಯಕುಮಾರ್ ಉಪಸ್ಥಿತರಿರಲಿದ್ದಾರೆ.