ವೀರಾಜಪೇಟೆ, ಜ. ೧೭: ಸಮೀಪದ ಕಲ್ಲುಬಾಣೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆ ಹಾಗೂ ಮಸೀದಿ ತಡೆಗೋಡೆಯನ್ನು ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಉದ್ಘಾಟಿಸಿದರು.
ರಸ್ತೆ ಉದ್ಘಾಟಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಆದರೆ, ಗ್ರಾಮಾಂತರ ಭಾಗದಲ್ಲಿ ರಸ್ತೆ ಮತ್ತು ಕುಡಿಯುವ ನೀರಿನ ಸಮಸ್ಯೆಗಳೇ ಹೆಚ್ಚಾಗಿ ಕಂಡುಬರುತ್ತವೆ. ಗ್ರಾಮಕ್ಕೆ ರಸ್ತೆ ಸಮಸ್ಯೆ ಇದೆ ಎಂದು ಇಲ್ಲಿನ ಪ್ರಮುಖರು ಮನವಿ ಮಾಡಿದ ಹಿನ್ನೆಲೆ ರಸ್ತೆ ನಿರ್ಮಾಣಕ್ಕೆ ರೂ. ೫ ಲಕ್ಷ, ಮಸೀದಿ ನಿರ್ಮಾಣಕ್ಕೆ ರೂ. ೩ ಲಕ್ಷ ಅನುದಾನವನ್ನು ನೀಡಿದ್ದೇನೆ. ಈ ಭಾಗದ ಗ್ರಾಮಪಂಚಾಯಿತಿ ಚುನಾಯಿತ ಜನಪ್ರತಿನಿಧಿಗಳು ಕೂಡ ಅವರ ಅನುದಾನ ವಿನಿಯೋಗಿಸಿ ಉತ್ತಮ ರಸ್ತೆ ಆಗುವಂತೆ ಮಾಡಿದ್ದಾರೆ ಎಂದರು.
ವೆಲ್ಪೇರ್ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಬಶೀರ್ ಮಾತನಾಡಿ, ಗ್ರಾಮದಲ್ಲಿ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೊನಾ
ಮಡಿಕೇರಿ, ಜ. ೧೭: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಶ್ರೀನಿವಾಸ್ ಪೂಜಾರಿ, ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ತÀನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.