ಸೋಮವಾರಪೇಟೆ, ಜ. ೧೭: ತಾಲೂಕಿನ ಹಾನಗಲ್ಲು ಹಾಗೂ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ರೂ. ೧.೬೧ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಚಾಲನೆ ನೀಡಿದರು.

ಲೋಕೋಪಯೋಗಿ ಇಲಾಖೆ, ಎನ್‌ಡಿಆರ್‌ಎಫ್ ಅನುದಾನ, ಜಿ.ಪಂ., ತಾ.ಪಂ.ನಿAದ ಕೈಗೊಳ್ಳಲು ಉದ್ದೇಶಿಸಲಾಗಿರುವ ರಸ್ತೆ, ಚರಂಡಿ, ಮೋರಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು, ಹಾನಗಲ್ಲು ಗ್ರಾ.ಪಂ. ವ್ಯಾಪ್ತಿಯಲ್ಲಿ ರೂ. ೮೩ ಲಕ್ಷ ಹಾಗೂ ತೋಳೂರುಶೆಟ್ಟಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ರೂ.೭೮ ಲಕ್ಷ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡಬೇಕೆಂದು ಸೂಚಿಸಿದರು.

ಮುಂದಿನ ೧೫ ದಿನಗಳಲ್ಲಿ ಮತ್ತೊಮ್ಮೆ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ತಲಾ ರೂ. ೨೦ ಲಕ್ಷ ಅನುದಾನ ಒದಗಿಸಲಾಗುವುದು. ಮೋರಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು, ಹಾನಗಲ್ಲು ಗ್ರಾ.ಪಂ. ವ್ಯಾಪ್ತಿಯಲ್ಲಿ ರೂ. ೮೩ ಲಕ್ಷ ಹಾಗೂ ತೋಳೂರುಶೆಟ್ಟಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ರೂ.೭೮ ಲಕ್ಷ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡಬೇಕೆಂದು ಸೂಚಿಸಿದರು.

ಮುಂದಿನ ೧೫ ದಿನಗಳಲ್ಲಿ ಮತ್ತೊಮ್ಮೆ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ತಲಾ ರೂ. ೨೦ ಲಕ್ಷ ಅನುದಾನ ಒದಗಿಸಲಾಗುವುದು. ಇದರೊಂದಿಗೆ ಕೃಷಿಕ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ ಪ್ರತಿ ರೈತರ ಖಾತೆಗೆ ವಾರ್ಷಿಕ ರೂ. ೬ ಸಾವಿರ ಹಾಗೂ ರಾಜ್ಯ ಸರ್ಕಾರ ೪ ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದೆ. ಒಂದು ವೇಳೆ ದಾಖಲೆಗಳು ಸಮಪರ್ಕವಾಗಿದ್ದೂ ಹಣ ಬಾರದಿದ್ದರೆ ತಮ್ಮ ಕಚೇರಿಯ ಗಮನಕ್ಕೆ ತರಬೇಕೆಂದು ಶಾಸಕರು ತಿಳಿಸಿದರು.

ತೋಳೂರುಶೆಟ್ಟಳ್ಳಿಯಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಶೇಖರ್, ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ, ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಮಾಜಿ ಸದಸ್ಯ ಬಿ.ಎ. ಧರ್ಮಪ್ಪ, ಪ್ರಮುಖರಾದ ಮೋಹಿತ್ ತಿಮ್ಮಯ್ಯ, ಕೆ.ಕೆ. ಸುಧಾಕರ್, ಉಮೇಶ್, ವಿಜಯಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಾನಗಲ್ಲು ವ್ಯಾಪ್ತಿಯಲ್ಲಿ ಭೂಮಿಪೂಜೆ ನೆರವೇರಿಸಿದ ಸಂದರ್ಭ ತಾ.ಪಂ. ಮಾಜೀ ಸದಸ್ಯೆ ತಂಗಮ್ಮ, ಗ್ರಾ.ಪಂ. ಅಧ್ಯಕ್ಷೆ ಲಕ್ಷಿö್ಮÃ ಪಾಂಡಿಯನ್, ಉಪಾಧ್ಯಕ್ಷ ಮಿಥುನ್, ಸದಸ್ಯರುಗಳು, ಪ್ರಮುಖರಾದ ಜಗದೀಶ್, ಶಿವಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.