ಕೂಡಿಗೆ, ಜ. ೧೭: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಇಓ ಕಚೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಜಿ.ರಂಗನಾಥಸ್ವಾಮಿ ಅವರು ಬಡ್ತಿ ಹೊಂದಿ ಕೂಡಿಗೆ ಡಯಟ್ ಸಂಸ್ಥೆಯ ಉಪ ನಿರ್ದೇಶಕರು( ಅಭಿವೃದ್ಧಿ) ಹಾಗೂ ಪ್ರಾಂಶುಪಾಲರಾಗಿ ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಡಯಟ್ ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತಿದ್ದ ಶ್ರೀ ಕೆ.ವಿ.ಸುರೇಶ್ ಅವರು ಸಂಸ್ಥೆಯ ನೂತನ ಪ್ರಾಂಶುಪಾಲರಾದ ಜಿ. ರಂಗನಾಥಸ್ವಾಮಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಉಪನ್ಯಾಸಕರು, ಸಿಬ್ಬಂದಿ ಹಾಜರಿದ್ದರು.