ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರಿಗೆ ಮನವಿ
ಸೋಮವಾರಪೇಟೆ, ಜ. ೧೭: ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳಾದ ಸೇವಾ ಭದ್ರತೆ ಹಾಗೂ ಸೇವಾ ವಿಲೀನತೆಯನ್ನು ಬೇಷರತ್ತಾಗಿ ಈಡೇರಿಸುವ ಬದಲು ರಾಜ್ಯ ಸರ್ಕಾರ ಉಪನ್ಯಾಸಕರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ ಎಂದು ಆರೋಪಿಸಿರುವ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ವೇದಿಕೆ, ಈ ಬಗ್ಗೆ ಸರ್ಕಾರ ತುರ್ತು ಕ್ರಮ ವಹಿಸಬೇಕೆಂದು ಶಾಸಕ ಅಪ್ಪಚ್ಚುರಂಜನ್ ಅವರಿಗೆ ಮನವಿ ಸಲ್ಲಿಸಿತು.
ಅತಿಥಿ ಉಪನ್ಯಾಸಕರಿಗೆ ಗೌರವ ಧನ ಹೆಚ್ಚು ಮಾಡಲಾಗಿದೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದ್ದು, ವಾಸ್ತವವಾಗಿ ಇದು ಸತ್ಯಕ್ಕೆ ದೂರವಾಗಿದೆ. ಈಗಿರುವ ಉಪನ್ಯಾಸಕರ ಕಾರ್ಯಭಾರದ ಅವಧಿಯನ್ನು ಹೆಚ್ಚುಗೊಳಿಸಿ ಅದಕ್ಕೆ ತಕ್ಕಂತೆ ಗೌರವ ಧನ ನೀಡುವ ಪ್ರಕ್ರಿಯೆ ಇದಾಗಿದೆ. ಕಾರ್ಯಭಾರ ಹೆಚ್ಚಳದಿಂದಾಗಿ ೭ ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಸಂಘದ ಅಧ್ಯಕ್ಷ ಶ್ಯಾಂಪ್ರಸಾದ್ ಆರೋಪಿಸಿದ್ದಾರೆ.
ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸದ ಹೊರತು ಗೌರವಧನ ಏರಿಕೆ ಮಾಡಿ ಪ್ರಯೋಜನವಿಲ್ಲ. ಈ ಹಿನ್ನೆಲೆ ಸರ್ಕಾರ ಹಾಗೂ ಸಂಬAಧಿಸಿದ ಸಚಿವರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವಂತೆ ಶಾಸಕ ಅಪ್ಪಚ್ಚುರಂಜನ್ ಅವರಿಗೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಈ ಸಂದರ್ಭ ಸಂಘದ ಪ್ರಧಾನ ಕಾರ್ಯದರ್ಶಿ ನಂಜುAಡಸ್ವಾಮಿ, ಪದಾಧಿಕಾರಿಗಳಾದ ಪೂರ್ಣಿಮಾ, ಸರಿತ, ಹರಿಣಿ, ಮನೋಜ್‌ಕುಮಾರ್, ಶಿವಕುಮಾರ್, ಶೈಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.