ಸೋಮವಾರಪೇಟೆ, ಜ. ೧೭: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವತಿಯಿಂದ ನಿರ್ಮಿಸಲು ಉದ್ದೇಶಿಸಲಾಗಿರುವ ಕಚೇರಿ ಮತ್ತು ಭವನ ನಿರ್ಮಾಣಕ್ಕೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ತಲಾ ೫ ಲಕ್ಷ ಅನುದಾನ ಘೋಷಿಸಿದರು.
ನೂತನ ಭವನ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಮೋಟಾರ್ ಯೂನಿಯನ್ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ನೂತನ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ೫ ಲಕ್ಷ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು, ತಮ್ಮ ನಿಧಿ ಯಿಂದಲೂ ೫ ಲಕ್ಷ ನೀಡುವುದಾಗಿ ಘೋಷಿಸಿದರು.
ಈ ಸಂದರ್ಭ ಮೋಟಾರ್ ಯೂನಿಯನ್ ಅಧ್ಯಕ್ಷ ಕೆ.ಜಿ.ಸುರೇಶ್, ಗೌರವಾಧ್ಯಕ್ಷ ಭರತ್, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಕಾರ್ಯದರ್ಶಿ ಇಬ್ರಾಹಿಂ, ಉಪ ಕಾರ್ಯದರ್ಶಿ ಎಸ್.ಎಂ. ಕೃಷ್ಣ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಉಪಾಧ್ಯಕ್ಷ ಸಂಜೀವ, ಮುಖ್ಯಾಧಿಕಾರಿ ನಾಚಪ್ಪ, ತಾ.ಪಂ. ಮಾಜಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.