ಮಡಿಕೇರಿ, ಜ. ೧೭: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಕೊಡಗು ಶಾಖೆ ಹಾಗೂ ಜಿಲ್ಲಾ ದಿವ್ಯಾಂಗರ ಒಕ್ಕೂಟ, ಸಂಯುಕ್ತ ಆಶ್ರಯದಲ್ಲಿ ಮೂರ್ನಾಡಿನ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ “ವಿವೇಕಾನಂದ ಜಯಂತಿ ದಿನಾಚರಣೆ & ರಾಷ್ಟಿçÃಯ ಯುವ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಕೃಷ್ಣಪ್ಪ ಎಂ. ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಯುವಜನಕ್ಕೆ ಸ್ಪೂರ್ತಿಯಾಗಿದ್ದು, ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಅಭಿವೃದ್ದಿಗೆ ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ದಿವ್ಯಾಂಗರ ಒಕ್ಕೂಟದ ಮಹೇಶ್ವರ್ ಜೆ. ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಯುವಜನರು ರೂಡಿಸಿಕೊಂಡು ಅವರು ನೀಡಿರುವ ಸಂದೇಶಗಳನ್ನು ವಿದ್ಯಾರ್ಥಿ ಜೀವನದಿಂದಲೇ ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಚಂದ್ರಶೇಖರ್ ಕೆ. ಎನ್. ಮಾತನಾಡಿದರು.

ಇದೇ ಸಂದರ್ಭದಲ್ಲಿ ‘ರಾಷ್ಟç ನಿರ್ಮಾಣದಲ್ಲಿ ಯುವಜನರÀ ಪಾತ್ರ - ಸ್ವಾಮಿ ವಿವೇಕಾನಂದರ ದೃಷ್ಠಿ’ಯಲ್ಲಿ ವಿಷಯಕ್ಕೆ ಸಂಬAಧಿಸಿದ ಪ್ರಬಂಧ ಸ್ವರ್ಧೆಯಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಗುರುರಾಜ್ ಕೆ.ಪಿ, ಶಿಕ್ಷಕರು & ವಿದ್ಯಾರ್ಥಿಗಳು, ಎಸ್.ವಿ.ವೈ.ಎಂ. ಸಂಸ್ಥೆಯ ಕೊಡಗು ಶಾಖೆಯ ಕಾರ್ಯಕ್ರಮ ವ್ಯವಸ್ಥಾಪಕರಾದ ಅಂಕಾಚಾರಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲಾ ದಿವ್ಯಾಂಗರ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು.