ಮಡಿಕೇರಿ, ಜ. ೧೭: ಜಿಲ್ಲೆಯಲ್ಲಿ ಸೋಮವಾರ ೧೫೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೧೪೮ ಪ್ರಕರಣಗಳು ಮಡಿಕೇರಿ, ಜ. ೧೭: ಜಿಲ್ಲೆಯಲ್ಲಿ ಸೋಮವಾರ ೧೫೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೧೪೮ ಪ್ರಕರಣಗಳು ಸೋಮವಾರಪೇಟೆ ತಾಲೂಕಿನಲ್ಲಿ ೪೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೬,೭೫೩ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿ ಯಲ್ಲಿ ೯ ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೫,೫೨೬ ಮಂದಿ ಗುಣಮುಖ ರಾಗಿದ್ದಾರೆ. ಇದುವರೆಗೆ ಒಟ್ಟು ೪೩೮ ಮರಣ ಪ್ರಕರಣಗಳು ವರದಿಯಾಗಿವೆ. ೭೮೯ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್ಮೆAಟ್ ವಲಯಗಳ ಸಂಖ್ಯೆ ೧೨೯ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೨೩.೩೩ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.