ಸೋಮವಾರಪೇಟೆ, ಜ. ೧೯: ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜೆಸಿಬಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಸಮೀಪದ ತೋಳೂರುಶೆಟ್ಟಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ನಡೆದಿದೆ.
ಕೂತಿ ಗ್ರಾಮ ನಿವಾಸಿ, ಪತ್ರಿಕಾ ವರದಿಗಾರರೂ ಆಗಿರುವ ಲಕ್ಷಿö್ಮಕಾಂತ್ ಅವರು ತಮ್ಮ ಮನೆ ಸಮೀಪದ ಕಾಫಿ ತೋಟದಲ್ಲಿ, ಅರಕಲಗೂಡಿನ ಕೆಂಪಣ್ಣ ಎಂಬವರಿಗೆ ಸೇರಿದ ಜೆಸಿಬಿಯಿಂದ ಚಾಲಕ ಹೊನ್ನರಾಜು ಅವರ ಮುಖಾಂತರ ಕೆಲಸ ಮಾಡಿಸುತ್ತಿದ್ದರು. ಕೆಲಸ ಪೂರ್ಣಗೊಂಡ ನಂತರ ವಾಪಸ್ ತೆರಳುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಜೆಸಿಬಿ ಮಗುಚಿಕೊಂಡಿದೆ. ಪರಿಣಾಮ ಸಮೀಪದಲ್ಲೇ ಇದ್ದ ಲಕ್ಷಿö್ಮÃಕಾಂತ್ ಅವರಿಗೆ ತೀವ್ರ ಪೆಟ್ಟಾಗಿದ್ದು, ತಕ್ಷಣ ಸ್ಥಳೀಯರು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಸಣ್ಣಪುಟ್ಟ ಗಾಯಗಳೊಂದಿಗೆ ಚಾಲಕ ಪಾರಾಗಿದ್ದಾನೆ. ಲಕ್ಷಿö್ಮÃಕಾಂತ್ ಅವರ ಸೊಂಟ, ಬೆನ್ನು ಹಾಗೂ ಕುತ್ತಿಗೆ ಭಾಗಕ್ಕೆ ಗಂಭೀರ ಪೆಟ್ಟಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.