ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ

ಬೆಂಗಳೂರು, ಜ. ೧೯: ೧೦-೧೨ ದಿನಗಳ ಕಾಲ ಕ್ವಾರಂಟೈನ್ ಇದ್ದು ಕೋವಿಡ್ ನೆಗೆಟಿವ್ ವರದಿ ಬಂದಿದ್ದು, ಇದೀಗ ಸಂಪೂರ್ಣ ಗುಣಮುಖನಾಗಿರುವುದರಿಂದ ಬುಧವಾರದಿಂದ ದೈನಂದಿನ ಕೆಲಸ ಕಾರ್ಯಗಳು ಕಚೇರಿಯಲ್ಲಿ ಮುಂದುವರಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಯನ್ನು ವರ್ಚುವಲ್ ಮಾಡಲಾಗಿದ್ದು, ಯಾವ ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆಯ ಕೊರತೆಯಿದೆಯೋ ಅಲ್ಲಿ ಲಸಿಕೆ ಪ್ರಮಾಣ ಹೆಚ್ಚು ಮಾಡಬೇಕೆಂದು ವಿಶೇಷವಾಗಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವುದು, ಕೋವಿಡ್ ವಾರಿಯರ್ಸ್ಗೆ ಇನ್ನಷ್ಟು ತೀವ್ರಗತಿಯಲ್ಲಿ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದರು. ಕೋವಿಡ್ ನಿಯಮ ಉಲ್ಲಂಘಿಸಿದವರು ಯಾರೇ ಆಗಿದ್ದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಮುಖ್ಯ ಕಾರ್ಯದರ್ಶಿಗಳು ಲಿಖಿತ ಆದೇಶ ಹೊರಡಿಸಿದ್ದಾರೆ. ಅದು ಯಾವುದೇ ಪಕ್ಷದವರಾಗಿದ್ದರೂ, ಯಾವ ಸಂಘಟನೆಯಾದರೂ ಕೋವಿಡ್ ನಿಯಮ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್‌ನವರು ದೂರು ನೀಡಬೇಕಾಗಿಲ್ಲ, ನಾವೇ ಸ್ವಯಂಪ್ರೇರಣೆಯಿAದ ಮಾಡುತ್ತೇವೆ ಎಂದರು. ವೀಕೆಂಡ್ ಕರ್ಫ್ಯೂ ಬೇಡ, ವ್ಯಾಪಾರ-ವಹಿವಾಟು ನಮ್ಮ ಬದುಕಿಗೆ ಬಹಳ ಕಷ್ಟವಾಗುತ್ತಿದೆ ಎಂದು ಈಗಾಗಲೇ ಹಲವರು ವಿರೋಧ ವ್ಯಕ್ತಪಡಿಸಿ ಸರ್ಕಾರಕ್ಕೆ ಬಹಳ ಒತ್ತಡ ಹಾಕುತ್ತಿದ್ದಾರೆ. ಒಂದೆಡೆ ಕೋವಿಡ್ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರುವಾಗ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಮುಂದುವರಿಸಬೇಕಾ ಅಥವಾ ರದ್ದುಪಡಿಸಬೇಕಾ ಎಂಬ ಗೊಂದಲದಲ್ಲಿ ಸರ್ಕಾರವಿದೆ. ಹೀಗಿರುವಾಗ ಇನ್ನೆರಡು ದಿನಗಳಲ್ಲಿ ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ, ನಮ್ಮ ರಾಜ್ಯದ ಜಿಲ್ಲೆಗಳಲ್ಲಿನ ಸ್ಥಿತಿಗತಿ ನೋಡಿಕೊಂಡು ವರದಿ ತಯಾರಿಸುತ್ತಿದ್ದಾರೆ. ಅವರು ಶುಕ್ರವಾರ ವರದಿ ನೀಡಲಿದ್ದು ಅದರ ಆಧಾರದ ಮೇಲೆ ಚರ್ಚೆ ಮಾಡಿ ಅಂದೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಅAರ‍್ರಾಷ್ಟಿçÃಯ ಪ್ರಯಾಣಿಕ ವಿಮಾನ ನಿರ್ಬಂಧ ವಿಸ್ತರಣೆ

ನವದೆಹಲಿ, ಜ. ೧೯: ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆ ಕಳೆದ ಎರಡು ವರ್ಷದಿಂದ ನಿಗದಿತ ಅಂರ‍್ರಾಷ್ಟಿçÃಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಫೆಬ್ರವರಿ ೨೮ ರವರೆಗೆ ವಿಸ್ತರಿಸಲಾಗಿದೆ. ಅಂರ‍್ರಾಷ್ಟಿçÃಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ೨೦೨೨, ಫೆಬ್ರವರಿ ೨೮ ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಅಧಿಸೂಚನೆ ಹೊರಡಿಸಿದೆ. ಅದಾಗ್ಯೂ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ನಿಗದಿತ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ಡಿಜಿಸಿಎ ಕಳೆದ ಡಿಸೆಂಬರ್ ೧೫ ರಿಂದ ನಿಗದಿತ ಅಂರ‍್ರಾಷ್ಟಿçÃಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಆದರೆ ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ನಂತರ ತನ್ನ ನಿರ್ಧಾರ ಬದಲಿಸಿದ್ದು, ಫೆಬ್ರವರಿ ೨೮ ರವರೆಗೆ ಅಂರ‍್ರಾಷ್ಟಿçÃಯ ವಿಮಾನಗಳ ಮೇಲಿನ ನಿರ್ಬಂಧವನ್ನು ಮುಂದುವರೆಸಿದೆ. ಕಳೆದ ವರ್ಷ ಮಾರ್ಚ್ ೨೫ ರಂದು ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂರ‍್ರಾಷ್ಟಿçÃಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶದಿಂದ ಮುಖ್ಯ ಅತಿಥಿಗಳಿಲ್ಲ!

ನವದೆಹಲಿ, ಜ. ೧೯: ಗಣರಾಜ್ಯೋತ್ಸವಕ್ಕೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರು ಆಗಮಿಸುತ್ತಿಲ್ಲ. ಸರ್ಕಾರಿ ಮೂಲಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್-೧೯ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರನ್ನು ಅತಿಥಿಗಳನ್ನಾಗಿ ಆಹ್ವಾನಿಸುತ್ತಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ತಾ. ೨೭ ರಂದು ಪ್ರಧಾನಿ ನರೇಂದ್ರ ಮೋದಿ ಭಾರತ-ಕೇಂದ್ರ ಏಷ್ಯಾ ವರ್ಚ್ಯುಯಲ್ ಶೃಂಗಸಭೆಯನ್ನು ಆಯೋಜಿಸಲಿದ್ದಾರೆ. ಶೃಂಗಸಭೆಯಲ್ಲಿ ಕಝಕಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಕಿಸ್ತಾನ, ತುರ್ಮೇನಿಸ್ತಾನ ಹಾಗೂ ಉಜ್ಬೇಕಿಸ್ತಾನಗಳ ಸರ್ಕಾರದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ.

ಓಮಿಕ್ರಾನ್‌ನಿಂದ ಸಾವು ಹೆಚ್ಚಳ:ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ, ಜ. ೧೯: ಓಮಿಕ್ರಾನ್ ಸೌಮ್ಯ ರೋಗ ಲಕ್ಷಣಗಳನ್ನು ಹೊಂದಿದೆ, ತೀವ್ರತೆ ಕಡಿಮೆ ಎಂಬುದನ್ನು ದಾರಿತಪ್ಪಿಸುವ ಹೇಳಿಕೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತೊಮ್ಮೆ ಎಚ್ಚರಿಸಿದೆ. ಓಮಿಕ್ರಾನ್ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದೆ, ತೀವ್ರತೆ ಕಡಿಮೆ ಎಂಬುದನ್ನು ದಾರಿತಪ್ಪಿಸುವ ಹೇಳಿಕೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತೊಮ್ಮೆ ಎಚ್ಚರಿಸಿದ್ದು, ಓಮಿಕ್ರಾನ್‌ನಿಂದ ಆಸ್ಪತ್ರೆಗೆ ದಾಖಲಾಗುವುದು ಹಾಗೂ ಸಾವು ಜಾಗತಿಕ ಮಟ್ಟದಲ್ಲಿ ಹೆಚ್ಚಳವಾಗುತ್ತಿದೆ ಎಂದು ಡಬ್ಲ್ಯುಹೆಚ್‌ಒ ಮುಖ್ಯಸ್ಥ ಟೆಡ್ರೋಸ್ ಅಧಾನೋಮ್ ಘೆಬ್ರಿಯೆಸಸ್ ಹೇಳಿದ್ದಾರೆ. ಜಾನ್ಸ್ ಹಾಪ್ಕಿನ್ಸ್ ವಿವಿಯ ಮಾಹಿತಿಯ ಪ್ರಕಾರ ಜಾಗತಿಕ ಮಟ್ಟದಲ್ಲಿ ಕೊರೊನಾ ಕೇಸ್ ಲೋಡ್ ೩೩೩.೫ ಮಿಲಿಯನ್‌ನ್ನು ದಾಟಿದ್ದು, ೫.೫೫ ಮಿಲಿಯನ್‌ಗಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ೯.೬೮ ಬಿಲಿಯನ್ ಮಂದಿಗಿAತಲೂ ಹೆಚ್ಚಿನ ಜನ ಲಸಿಕೆಗಳನ್ನು ಪಡೆದಿದ್ದಾರೆ. ನಿರ್ಲಕ್ಷ್ಯ ವಹಿಸಿ ತಪ್ಪು ಮಾಡಬೇಡಿ, ಓಮಿಕ್ರಾನ್‌ನಿಂದ ಆಸ್ಪತ್ರೆಗೆ ಸೇರುವ ಸ್ಥಿತಿಯೂ ಬರುತ್ತದೆ. ಅಷ್ಟೇ ಅಲ್ಲದೇ ಸಾವೂ ಸಂಭವಿಸಬಹುದು, ಕಡಿಮೆ ತೀವ್ರತೆಯ ಪ್ರಕರಣಗಳೂ ಆರೋಗ್ಯ ಸೌಲಭ್ಯಗಳನ್ನು ಬುಡಮೇಲು ಮಾಡುತ್ತಿದೆ ಎಂದು ಡಬ್ಲ್ಯುಹೆಚ್‌ಒ ಮುಖ್ಯಸ್ಥರು ಎಚ್ಚರಿಸಿದ್ದಾರೆ. ಸರಾಸರಿಯಲ್ಲಿ ಓಮಿಕ್ರಾನ್ ಕಡಿಮೆ ತೀವ್ರತೆಯನ್ನು ಹೊಂದಿರಬಹುದು, ಆದರೆ ಅದು ಸೌಮ್ಯ ಲಕ್ಷಣಗಳನ್ನು ಹೊಂದಿದೆ ಎಂಬುದು ಮಾತ್ರ ದಾರಿ ತಪ್ಪಿಸುವ ವಿಷಯವಾಗಿದೆ. ಈ ರೀತಿ ವದಂತಿಗಳನ್ನು ಹಬ್ಬಿಸಿದರೆ ಅದರಿಂದ ಸಾವು-ನೋವುಗಳು ಹೆಚ್ಚಾಗುತ್ತದೆ ಎಂದು ಘೆಬ್ರಿಯೆಸಸ್ ಎಚ್ಚರಿಸಿದ್ದಾರೆ. ಭಾರತದಲ್ಲಿ ತಾ. ೧೯ ರಂದು ಒಂದೇ ದಿನ ೨,೮೨,೯೭೦ ಹೊಸ ಕೋವಿಡ್-೧೯ ಪ್ರಕರಣಗಳು ವರದಿಯಾಗಿದೆ. ಕೋವಿಡ್-೧೯ನ ಯಾವುದೇ ರೂಪಾಂತರಿಯೂ ಅಪಾಯಕಾರಿಯಾಗಿದ್ದು ಸಾವಿಗೆ ಕಾರಣವಾಗಬಹುದು ಮುಂದಿನ ರೂಪಾಂತರಿಗಳು ಮತ್ತಷ್ಟು ಅಪಾಯಕಾರಿಯಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.