ಸಿದ್ದಾಪುರ, ಜ. ೧೯: ಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಮೈಗೂಡಿಸಿಕೊಂಡು ಸಮುದಾಯದ ಬಡವರ ಶ್ರೇಯೋಭಿವೃದ್ಧಿಗೆ ಸಂಘಟನೆಗಳು ಶ್ರಮಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಕರೆ ನೀಡಿದರು.

ಸಿದ್ದಾಪುರದ ಎಸ್.ಎನ್.ಡಿ.ಪಿ. ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮಹಾನ್ ವ್ಯಕ್ತಿಯಾಗಿದ್ದು, ಇವರ ಮಾರ್ಗದರ್ಶನವು ಇಂದಿನ ಪೀಳಿಗೆಗೆ ಅವಶ್ಯಕತೆ ಇದೆ; ಎಸ್.ಎನ್.ಡಿ.ಪಿ. ಸಂಘಟನೆ ಸಮುದಾಯದಲ್ಲಿರುವ ಬಡವರ್ಗದ ಜನರನ್ನು ಮೇಲಕ್ಕೆತ್ತಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಸಲಹೆ ನೀಡಿದರು. ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಮುದಾಯ ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜಕೀಯ ದುರುದ್ದೇಶದಿಂದ ಆರೋಪ : ಈ ಬಾರಿಯ ಗಣರಾಜ್ಯೋತ್ಸವದಂದು ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರದರ್ಶನ ವಿಚಾರದಲ್ಲಿ ಕೇರಳ ಹಾಗೂ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ಷÄಲ್ಲಕ ರಾಜಕೀಯ ಮಾಡಿಕೊಂಡು ಇಲ್ಲದ ಸಲ್ಲದ ಆರೋಪ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ; ಮೋದಿ ಅವರಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಅಪಾರ ಗೌರವವಿದ್ದು, ಗುರುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಆದರೂ ಕೂಡ ಕಾಂಗ್ರೆಸ್ ಪಕ್ಷದವರು ರಾಜಕೀಯ ಲಾಭಕ್ಕಾಗಿ ಮೋದಿ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ ಎಂದರು.

ಎಸ್.ಎನ್.ಡಿ.ಪಿ. ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ. ಲೋಕೇಶ್ ಮಾತನಾಡಿ, ಸುಜಾ ಕುಶಾಲಪ್ಪ ಅವರು ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಹೊಂದಿದ್ದಾರೆAದರು. ಈ ಸಂದರ್ಭದಲ್ಲಿ ಎಸ್.ಎನ್.ಡಿ.ಪಿ. ಯೂನಿಯನ್ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಪದಾಧಿಕಾರಿಗಳಾದ ರಾಧಾಕೃಷ್ಣ, ರೀಶಾ, ಆನಂದ, ಅಶೋಕ್, ಸತೀಶ್, ಗಿರೀಶ್ ಮಟ್ಟಂ ಇನ್ನಿತರರು ಹಾಜರಿದ್ದರು. - ವಾಸು.