ಚೆಟ್ಟಳ್ಳಿ, ಜ. ೧೯: ಚೆಟ್ಟಳ್ಳಿಯಲ್ಲಿ ಶಾಸಕ ಅಪ್ಪಚ್ಚುರಂಜನ್ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭ ಚೆಟ್ಟಳ್ಳಿ ಬಿಜೆಪಿ ಸ್ಥಾಯಿ ಸಮಿತಿಯ ಪ್ರಮುಖ್ ಬಲ್ಲಾರಂಡ ಕಂಠಿ ಕಾರ್ಯಪ್ಪ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಟಿ ಮುತ್ತಪ್ಪ, ಉಪಾಧ್ಯಕ್ಷ ಬಿ.ಆರ್. ವಿಮಲಾಕ್ಷಿ ಪಂಚಾಯಿತಿ ಸದಸ್ಯರು, ಗ್ರಾಮದ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.