ಕೂಡಿಗೆ, ಜ. ೧೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿ ನೂತನವಾಗಿ ರೂ. ಹತ್ತು ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಸ ವಿಲೇವಾರಿ ಘಟಕವನ್ನು ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ನಂತರ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕಗಳನ್ನು ಪ್ರಾರಂಭ ಮಾಡುವ ಮೂಲಕ ಸ್ವಚ್ಛತೆಯನ್ನು ಕಾಪಾಡಲು ಅನುಕೂಲವಾಗುವುದು. ಗ್ರಾಮ ವ್ಯಾಪ್ತಿಯಲ್ಲಿ ರೋಗಗಳು ಹರಡದಂತೆ ತಡೆಗಟ್ಟಲು ಸಾಧ್ಯವಾಗುತ್ತದೆ. ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸರಕಾರದ ವತಿಯಿಂದ ಕಸ ಸಂಗ್ರಹಕ್ಕೆ ವಾಹನ ಖರೀದಿಸಲು ಹಣವನ್ನು ನೀಡಲಾಗಿದೆ. ಗ್ರಾಮಸ್ಥರು ವಾಹನ ಬಂದಾಗ ಕಸವನ್ನು ಹಾಕುವುದರ ಮೂಲಕ ಗ್ರಾಮ ಪಂಚಾಯಿತಿಗೆ ಸಹಕಾರ ನೀಡಬೇಕೆಂದು ತಿಳಿಸಿದರು.

ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸದಸ್ಯರಾದ ಕೆ.ಕೆ. ಭೋಗಪ್ಪ, ದಿನೇಶ್, ಗಿರೀಶ್, ಚಂದ್ರು, ಮೂಡ್ಲಿಗೌಡ, ಮಣಿ ಚೈತ್ರ, ದೀಪಾಲಕ್ಷಿö್ಮ, ಅಭಿವೃದ್ಧಿ ಅಧಿಕಾರಿ ಸಂತೋಷ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಮಾಜಿ ಅಧ್ಯಕ್ಷ ವಾಂಚಿರ ಮನು ನಂಜುAಡ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಮಂಜುನಾಥ, ಪ್ರವೀಣ್, ತಾಲೂಕು ಪಂಚಾಯಿತಿ ಸಹಾಯಕ ಕಾರ್ಯಪಾಲಕ ಅಭಿಯಂತರ ವೀರೇಂದ್ರ ಕುಮಾರ್, ಸಹಾಯಕ ಅಭಿಯಂತರ ಕಿರಣ್, ಶಾಸಕರ ಅಪ್ತ ಕಾರ್ಯದರ್ಶಿ ರವಿ ಸೇರಿದಂತೆ ಇತರರು ಹಾಜರಿದ್ದರು.