ಮಡಿಕೇರಿ, ಜ. ೧೯: ಜಿಲ್ಲೆಯಲ್ಲಿ ಬುಧವಾರ ೪೨೮ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೩೯೭ ಪ್ರಕರಣಗಳು ಆರ್ಟಿಪಿಸಿಆರ್ ಮತ್ತು ೩೧ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೧೭, ವೀರಾಜಪೇಟೆ ತಾಲೂಕಿನಲ್ಲಿ ೧೧೦, ಸೋಮವಾರಪೇಟೆ ತಾಲೂಕಿನಲ್ಲಿ ೨೦೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೭,೨೬೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೯ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೫,೬೨೯ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೮ ಮರಣ ಪ್ರಕರಣಗಳು ವರದಿಯಾಗಿವೆ. ೧೧೯೫ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್ಮೆAಟ್ ವಲಯಗಳ ಸಂಖ್ಯೆ ೧೬೬ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೧೨.೨೭ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.