ಕುಶಾಲನಗರ, ಜ.18: ಕುಶಾಲನಗರ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ 8 ವ್ಯಕ್ತಿಗಳ ಕುಟುಂಬಗಳಿಗೆ ರೂ. 1 ಲಕ್ಷ ಚೆಕ್ ವಿತರಣೆ ಮಾಡಲಾಯಿತು.

ಕುಶಾಲನಗರ ಪ್ರವಾಸಿ ಮಂದಿರದ ಆವರಣದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಲಾಯಿತು. ಚೆಕ್‍ಗಳನ್ನು ವಿತರಿಸಿ ಮಾತನಾಡಿದ ಶಾಸಕರು; ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಕೊರೊನಾ ಸೋಂಕು ತಡೆಗಟ್ಟಲು ಸಾಧ್ಯ ಎಂದರು.

ಈ ಸಂದರ್ಭ ತಾಲೂಕು ತಹಶೀಲ್ದಾರ್ ಪ್ರಕಾಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್, ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಡಿವೈಎಸ್ಪಿ ಶೈಲೆಂದ್ರ, ವೃತ್ತ ನಿರೀಕ್ಷಕ ಮಹೇಶ್, ಕಂದಾಯ ಇಲಾಖೆ ಅಧಿಕಾರಿಗಳು, ಮತ್ತಿತರರಿದ್ದರು.