ಮಡಿಕೇರಿ, ಜ. ೧೯: ಸ್ವಾತಂತ್ರö್ಯ ಭಾರತದ ಮೊದಲ ಸೇನಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಆಚರಿಸುವ ಸಂಬAಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ೧೨೩ನೇ ಜನ್ಮ ದಿನಾಚರಣೆ ಯನ್ನು ತಾ. ೨೮ ರಂದು ಆಚರಿಸುವ ಬಗ್ಗೆ ಚರ್ಚೆ ನಡೆಯಿತು. ಕೋವಿಡ್-೧೯ ಹಿನ್ನೆಲೆ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸುವುದು, ಹಾಗೆಯೇ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಕುರಿತು ಆನ್‌ಲೈನ್ ಮೂಲಕ ಪ್ರಬಂಧ ಸ್ಪರ್ಧೆ ಏರ್ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸುವಂತಾಗಬೇಕು ಎಂದು ಫೋರಂ ಅಧ್ಯಕ್ಷ ಕರ್ನಲ್ (ನಿವೃತ್ತ) ಸುಬ್ಬಯ್ಯ ಅವರು ಸಲಹೆ ಮಾಡಿದರು.

ಮೇಜರ್(ನಿವೃತ್ತ) ಬಿದ್ದಂಡ ನಂಜಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮ ದಿನಾಚರಣೆಗೆ ಸಂಬAಧಿಸಿದAತೆ ಹಲವು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜಯಂತಿ ಆಚರಣೆ ಸಂಬAಧ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜುಮೊಗವೀರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ನಗರಸಭೆಯ ಎಇಇ ರಾಜೇಂದ್ರ ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕ ಖುರ್ಷಿದ್ ಬಾನು, ಸೈನಿಕ ಕಲ್ಯಾಣ ಇಲಾಖೆಯ ವಿಘ್ನೇಶ್ವರ್ ಇತರರು ಇದ್ದರು.

ಸ್ಪರ್ಧೆ ಮಾಹಿತಿ: ಪ್ರೌಢಶಾಲಾ ವಿಭಾಗ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಕುರಿತ ಈieಟಜ mಚಿಡಿshಚಿಟ ಏ.ಒ. ಅಚಿಡಿiಚಿಠಿಠಿಚಿ ಒಚಿಟಿ oಜಿ ಆisಛಿiಠಿಟiಟಿe ಚಿಟಿಜ Pಚಿಣಡಿioಣism (ಆಂಗ್ಲ ಭಾಷೆ ಯಲ್ಲಿ ಬರೆಯುವವರಿಗೆ) ಅಥವಾ ಶಿಸ್ತಿನ ಸಿಪಾಯಿ ಹಾಗೂ ದೇಶಭಕ್ತ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ (ಕನ್ನಡ ಭಾಷೆಯಲ್ಲಿ ಬರೆಯುವವರಿಗೆ) ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.

ಈ ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರಿಗೆ ಬಹುಮಾನ ನೀಡಲಾಗುವುದು. ಪ್ರಬಂಧಗಳನ್ನು ಇ-ಮೇಲ್ ಈಒಅಏಔಆಂಉU೧೨೩@ gmಚಿiಟ.ಛಿom ಮೂಲಕ ಅಥವಾ ಹಾರ್ಡ್ ಕಾಫಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಮಡಿಕೇರಿ ಈ ವಿಳಾಸಕ್ಕೆ ಜನವರಿ, ೨೫ ರೊಳಗೆ ಕಳುಹಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದರ್ಶನ್ ಕೋರಿದ್ದಾರೆ.