ಮಡಿಕೇರಿ, ಜ.18: ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿದ್ದಲ್ಲಿ ಅವರುಗಳು ಬಿಪಿಎಲ್, ಎಪಿಎಲ್ ಕಾರ್ಡ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಚುನಾವಣಾ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ ಈ ದಾಖಲೆಗಳೊಂದಿಗೆ ತಾ. 31 ರೊಳಗೆ ತಮ್ಮ ಹತ್ತಿರದ ಸೆಸ್ಕ್ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.