ಮಡಿಕೇರಿ, ಜ.18: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯು ತಾ. 21, 2022 ರಂದು ರಾಜ್ಯಾದ್ಯಂತ ಆಯೋಜಿಸಲಾಗಿತ್ತು, ಪ್ರಸ್ತುತ ಕೋವಿಡ್-19 ಹಾಗೂ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಹೆಚ್ಚಿನ ಮಾಹಿತಿಗೆ ಸ್ಪರ್ಧೆಯ ರಾಜ್ಯ ಸಂಯೋಜಕರಾದ ಮೀನಾಕ್ಷಿ ಶಿವಾನಂದ ಕುಡಸೋಮಣ್ಣ ದೂ.ಸಂ.7353960666 ಅಥವಾ ಆಯಾಯ ಜಿಲ್ಲೆಯ ಜಿಲ್ಲಾ ಸಂಯೋಜಕರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಸಿ.ಕೃಷ್ಣೇಗೌಡ ಅವರು ತಿಳಿಸಿದ್ದಾರೆ.