ಮಡಿಕೇರಿ: ಮಡಿಕೇರಿಯ ಪುರಾತತ್ವ ಇಲಾಖೆ ಹಾಗೂ ವಸ್ತು ಸಂಗ್ರಹಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವೀರಾಜಪೇಟೆಯ ಸಹಭಾಗಿತ್ವದಲ್ಲಿ ಪೆಗ್ಗಲ ಗ್ರಾಮದ ಐತಿಹಾಸಿಕ ಭಗವತಿ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಎನ್.ಎಸ್.ಎಸ್ ಘಟಕದ ಕಾರ್ಯಕರ್ತರು ಮತ್ತು ಇತಿಹಾಸ ವಿಭಾಗದ ವಿದ್ಯಾರ್ಥಿಗಳು ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದರು. ದೇವಾಲಯದ ಅಧ್ಯಕ್ಷ ಅಮ್ಮಣಕುಟ್ಟಂಡ ಬೋಪಣ್ಣ ದೇವಸ್ಥಾನದ ಚರಿತ್ರೆಯ ಬಗ್ಗೆ ವಿದ್ಯಾರ್ಥಿಗಳೊಡನೆ ಹಂಚಿಕೂAಡರು. ಪುರಾತತ್ವ ಇಲಾಖೆ ಹಾಗೂ ವಸ್ತು ಸಂಗ್ರಹಾಲಯದ ಕ್ಯೂರೇಟರ್ ರೇಖಾ, ಕಾಲೇಜಿನ ಪ್ರಾಂಶುಪಾಲ ಪ್ರೊ. ಟಿ.ಕೆ. ಬೋಪಯ್ಯ ಹಾಜರಿದ್ದರು. ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೃತಿ ಪಾರ್ವತಿ ಬಿ.ಯಸ್, ಎನ್.ಎಸ್.ಎಸ್ ಘಟಕದ ಅಧಿಕಾರಿಗಳಾದ ರಘುರಾಜ್ ಮತ್ತು ದಿವ್ಯ ಎಂ.ಬಿ. ಇದ್ದರು.ಸುಂಟಿಕೊಪ್ಪ: ನಾಕೂರು, ಶಿರಂಗಾಲ, ಕಾನ್‌ಬೈಲ್‌ನ ಶ್ರೀ ರಾಮ ಮಂದಿರದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಪ್ರಗತಿ ಬಂಧು ಒಕ್ಕೂಟ, ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಸ್ವಚ್ಛತಾ ಕಾರ್ಯ ನಡೆಸಿದರು.

ಈ ಸಂದರ್ಭ ಶ್ರೀ ರಾಮ ಮಂದಿರ ದೇವಸ್ಥಾನ ಸಮಿತಿಯ ಅಧ್ಯಕ್ಷ ನರೇಂದ್ರ, ಕಾರ್ಯದರ್ಶಿ ವಿಜಯಕುಮಾರ್ ಹಾಗೂ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪುಷ್ಪಲತಾ, ಒಕ್ಕೂಟದ ಅಧ್ಯಕ್ಷೆ ರೇಖಾ, ಜನನಿ ಮತ್ತು ಮೂಕಾಂಬಿಕ ಸ್ವಸಹಾಯ ಸಂಘದ ಪ್ರಬಂಧಕರುಗಳಾದ ಜಯಂತಿ, ರತ್ನ ಸೇವಾ ಪ್ರತಿನಿಧಿ ಯಶೋಧ ಬಸವರಾಜು, ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಇದ್ದರು.ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಂಟಿಕೊಪ್ಪದ ಗದ್ದೆಹಳ್ಳ ಒಕ್ಕೂಟದ ಸದಸ್ಯರಿಂದ ಶ್ರೀ ಚಾಮುಂಡೇಶ್ವರಿ ಹಾಗೂ ಮುತ್ತಪ್ಪ ದೇವಾಲಯದ ಆವರಣದಲ್ಲಿ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಯಂಕನ ಕರುಂಬಯ್ಯ, ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ದೇವಾಲಯದ ಅರ್ಚಕರು, ಗದ್ದೆಹಳ್ಳ ಒಕ್ಕೂಟದ ಅಧ್ಯಕ್ಷೆ ನಾಗರತ್ನ ಸುರೇಶ್, ಉಪಾಧ್ಯಕ್ಷ ಆನಂದ, ಸೇವಾ ಪ್ರತಿನಿಧಿ ಜ್ಯೋತಿಲಕ್ಷಿö್ಮ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುಂಟಿಕೊಪ್ಪ ಒಕ್ಕೂಟ ಮಹಿಳಾ ಸ್ವ ಸಹಾಯ ಸಂಘ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘದ ಸದಸ್ಯರು ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಸುಂಟಿಕೊಪ್ಪ ಪಟ್ಟಣದ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನದ ಆವರಣವನ್ನು ಸುಂಟಿಕೊಪ್ಪ ಪ್ರಗತಿ ಬಂಧು ಒಕ್ಕೂಟ ವಿವಿಧ ಸ್ವ ಸಹಾಯ ಸಂಘಗಳು ಹಾಗೂ ಪ್ರಗತಿ ಬಂಧು ಪುರುಷ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಒಗ್ಗೂಡಿ ದೇವಾಲಯದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿ ಕಡಿದು ಸ್ವಚ್ಛಗೊಳಿಸಿ, ದೇವಸ್ಥಾನದ ಪ್ಲಾಸ್ಟಿಕ್, ಕಸ ಕಡ್ಡಿ ಇನ್ನಿತರ ತ್ಯಾಜ್ಯಗಳನ್ನು ವಿಲೇವಾರಿಗೊಳಿಸಿ ಶುಚಿಗೊಳಿಸಿದರು.

ಸ್ವಚ್ಛತಾ ಕಾರ್ಯ ಸಂದರ್ಭ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವೈ.ಎಂ. ಕರುಂಬಯ್ಯ ಹಾಗೂ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪುಷ್ಪಲತಾ, ಒಕ್ಕೂಟದ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ಆನಂದ, ಸೇವಾ ಪ್ರತಿನಿಧಿ ಜ್ಯೋತಿಲಕ್ಷಿö್ಮ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.