ಕೂಡಿಗೆ, ಜ. ೧೯: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಅಣೆಕಟ್ಟೆಯ ಮುಂಭಾಗದ ನಾಲ್ಕು ರಸ್ತೆಗಳು ಕೂಡುವ ಸ್ಥಳದಲ್ಲಿ ವೃತ್ತ ನಿರ್ಮಾಣ ಮಾಡುವ ಕಾರ್ಯ ಆರಂಭವಾಗಿದೆ.
ಈ ಜಾಗದಲ್ಲಿ ಅನೇಕ ಅಪಘಾತಗಳು ಆಗುತ್ತಿದ್ದವು ಅದನ್ನು ತಿಳಿದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಗಮನಕ್ಕೆ ತಂದು ಅವರ ಸೂಚನೆಯಂತೆ ಹಾರಂಗಿ ನೀರಾವರಿ ಇಲಾಖೆಯ ಮೂಲಕ ತಾತ್ಕಾಲಿಕವಾದ ವೃತ್ತವನ್ನು ನಿರ್ಮಾಣ ಮಾಡುವ ಕಾರ್ಯದಲ್ಲಿ ನೀರಾವರಿ ಇಲಾಖೆಯವರು ತೊಡಗಿದ್ದಾರೆ.
ಈ ಸಂದರ್ಭದಲ್ಲಿ ಭಾಸ್ಕರ್ ನಾಯಕ್, ಹಾರಂಗಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಹೇಂದ್ರಕುಮಾರ್ ಇಂಜಿನಿಯರ್ ಸಿದ್ದರಾಜ್, ಕಿರಣ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.