ಮಡಿಕೇರಿ, ಜ. ೨೧: ಪ್ರಸಕ್ತ ಸಾಲಿಗೆ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜನವರಿ, ೨೭ ರ ವರೆಗೆ ಕಾಲಾವಕಾಶ ನೀಡಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ. ರೂ. ೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ರೂ. ೧ ಲಕ್ಷ ಆಗಿದೆ.

ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೨೭ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಹಾಗೂ ಅರ್ಜಿ ಸಲ್ಲಿಕೆಗೆ ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.hosಣeಟs@ ಞಚಿಡಿಟಿಚಿಣಚಿಞಚಿ.gov.iಟಿ ಗೆ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕಾದ ಸಹಾಯವಾಣಿ ದೂರವಾಣಿ: ೦೮೦-೮೦೫೦೩೭೦೦೦೬ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮತ್ತು ತಾಲ್ಲೂಕು ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊ.ಸಂ. ಜಿಲ್ಲಾ ಕಚೇರಿ ಮಡಿಕೇರಿ ಮೊ.ಸಂ. ೯೪೪೮೨೦೫೯೧೯, ಮಡಿಕೇರಿ ತಾಲೂಕು ಕಚೇರಿ ಮೊ.ಸಂ. ೯೪೮೦೩೫೬೪೦೯, ವೀರಾಜಪೇಟೆ ತಾಲೂಕು ಕಚೇರಿ ಮೊ. ೮೭೬೨೪೭೬೭೯೦, ಸೋಮವಾರಪೇಟೆ ತಾಲೂಕು ಕಚೇರಿ ಮೊ. ೮೬೬೦೦೧೯೦೪೨ ನ್ನು ಸಂಪರ್ಕಿಸಿ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ಕರೆ ಮಾಡಿ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.