ಮಡಿಕೇರಿ, ಜ. ೨೧: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಗಾಯತ್ರಿ ನರಸಿಂಹ ನೇಮಕಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಅವರ ಆದೇಶದ ಮೇರೆಗೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಅವರ ಶಿಫಾರಸ್ಸಿನಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಟಿ.ಡಿ. ಗೋವಿಂದರಾಜ್ ದಾಸ್ ಅವರು ನೇಮಕ ಮಾಡಿದ್ದಾರೆ.