ಮಡಿಕೇರಿ, ಜ. ೨೧: ಜಿಲ್ಲಾಡಳಿತ ವತಿಯಿಂದ ತಾ. ೨೬ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಎಸ್. ರವಿ ಕುಶಾಲಪ್ಪ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಎನ್.ಪಿ.ಅನಿತಾ, ಜಿ.ಪಂ. ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.