ಮಡಿಕೇರಿ ಜ. ೨೧: ನಗರದ ಫೀ.ಮಾ. ಕಾರ್ಯಪ್ಪ ವೃತ್ತದಲ್ಲಿ ಅಳವಡಿಸಿದ್ದ “ಫೀ.ಮಾ. ಕೆ.ಎಂ. ಕಾರ್ಯಪ್ಪ ಸರ್ಕಲ್” ಎಂಬ ನಾಮಫಲಕ ನಾಪತ್ತೆ ಪ್ರಕರಣಕ್ಕೆ ಸಂಬAಧಿಸಿದAತೆ ಸೂಕ್ತ ತನಿಖೆ ನಡೆಸಿ ಸತ್ಯಾಂಶವನ್ನು ಜನರಿಗೆ ತಿಳಿಸಬೇಕು ಮತ್ತು ಉದ್ದೇಶಪೂರ್ವಕವಾಗಿ ತಪ್ಪು ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಅವರ ನೇತೃತ್ವದಲ್ಲಿ ಕೊಡಗು ಪೀಪಲ್ಸ್ ಫೋರಂನ ಅಧ್ಯಕ್ಷ ಮಾದೇಟಿರ ತಿಮ್ಮಯ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಪ್ರಕರಣದ ಕುರಿತು ನೈಜಾಂಶವನ್ನು ಬಯಲಿಗೆಳೆಯಬೇಕು ಎಂದರು. ದೂರು ದಾಖಲಿಸುವ ಸಂದರ್ಭ ಪ್ರಮುಖರಾದ ಕುಲ್ಲೇಟಿರ ಅಜಿತ್ ನಾಣಯ್ಯ, ಒಡಿಯಂಡ ನವೀನ್ ತಿಮ್ಮಯ್ಯ ಹಾಗೂ ಕೊಕ್ಕೆಲೆರ ಶ್ಯಾಂ ತಿಮ್ಮಯ್ಯ ಹಾಜರಿದ್ದರು.