ಕೂಡಿಗೆ, ಜ. ೨೧: ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಯುವ ಸಪ್ತಾಹ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ರಕ್ತದಾನ ಮಾಡುವ ಮೂಲಕ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಕರೆ ನೀಡಿದರು.

ಪ್ರಾಂಶುಪಾಲ ಹೆಚ್.ಬಿ. ಲಿಂಗಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಭರತ್ ಮಾಚಯ್ಯ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಜಿಲ್ಲಾ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಕರುಂಬಯ್ಯ, ರೆಡ್‌ಕ್ರಾಸ್ ಸಂಚಾಲಕ ರಮೇಶ್ ಚಂದ್ರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯ ನವನೀತ್ ಹಾಜರಿದ್ದರು.

ಈ ಸಂದರ್ಭ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಪ್ರಮುಖರಾದ ಪುಂಡರೀಕಾಕ್ಷ, ಕುಮಾರಪ್ಪ, ಶಿವಣ್ಣ, ಪಟ್ಟಣ ಪಂಚಾಯಿತಿ ಸದಸ್ಯ ಅಮೃತರಾಜ್ ಮುಂತಾದವರು ಹಾಜರಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥ ಸುನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಡಾ. ರಶ್ಮಿ ಪ್ರಾರ್ಥಿಸಿದರು. ಕಾವೇರಪ್ಪ ವಂದಿಸಿದರು. ೫೦ ಮಂದಿ ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು.