ಮಡಿಕೇರಿ, ಜ. ೨೦: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಶ್ರೀ ವೇಮನ ಜಯಂತಿ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಶ್ರೀ ವೇಮನ ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಪುಷ್ಪಾರ್ಚನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ, ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಪ್ರವೀಣ್ ಹಾಗೂ ಸಿಬ್ಬಂದಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಿಬ್ಬಂದಿ ವರ್ಗದವರು, ನಗರಾಭಿವೃದ್ಧಿ ಇಲಾಖೆಯ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.