ಮಡಿಕೇರಿ, ಜ. ೨೦: ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ಕೋವಿಡ್-೧೯ ಪಾಸಿಟಿವಿಟಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜೊತೆಗೆ ಹೋಂ ಐಸೋಲೇಷನ್ನಲ್ಲಿ ಇರುವವರಿಗೆ ವೈದ್ಯಕೀಯ ಕಿಟ್ ವಿತರಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದ್ದಾರೆ.
ಕೋವಿಡ್-೧೯ ನಿಯಂತ್ರಣ ಸಂಬAಧಿಸಿದAತೆ ವೀಡಿಯೋ ಸಂವಾದ ಮೂಲಕ ಮಾಹಿತಿ ಪಡೆದು ಸಚಿವರು ಮಾತನಾಡಿದರು.
ಕೋವಿಡ್ ನಿಯಂತ್ರಣ ಸಂಬAಧಿಸಿದAತೆ ಎಲ್ಲಾ ಹಂತದ ಅಧಿಕಾರಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು. ಗ್ರಾ.ಪಂ. ಮಟ್ಟದಲ್ಲಿ ಕಾರ್ಯಪಡೆಯನ್ನು ಕ್ರಿಯಾಶೀಲಗೊಳಿಸಬೇಕು. ಗ್ರಾಮ, ಶಾಲಾ, ಕಾಲೇಜುಗಳಿಗೆ ಅಧಿಕಾರಿ ಗಳು ಭೇಟಿ ನೀಡಿ ಪರಿಶೀಲಿಸಬೇಕು.
ಎರಡನೇ ಡೋಸ್ ಪಡೆದು ಒಂಬತ್ತು ತಿಂಗಳ ನಂತರ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಬೇಕು. ಹಾಗೆಯೇ ೧೫ ರಿಂದ ೧೮ ವರ್ಷದ ಎಲ್ಲಾ ಮಕ್ಕಳು ಕೋವಿಡ್ ನಿಯಂತ್ರಣ ಲಸಿಕೆ ನೀಡುವಲ್ಲಿ ಮೂರು ದಿನದೊಳಗೆ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ಫ್ಯೂನಲ್ಲಿ ತೊಂದರೆ ಆಗಬಾರದು
ವಾರಾಂತ್ಯ ಕರ್ಫ್ಯೂ ಸಂದರ್ಭ ದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಗಮನಹರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣ ಸಂಬAಧ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಕೋವಿಡ್-೧೯ ಪಾಸಿಟಿವ್ ಬಂದ ಪ್ರದೇಶಗಳಲ್ಲಿ ಕೋವಿಡ್ ನಿಯಮ ಪಾಲಿಸುವಲ್ಲಿ ಸ್ಥಳೀಯರಿಗೆ ಮನವರಿಕೆ ಮಾಡಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ನಿರ್ದೇಶನ ನೀಡಿದರು.
ಜಿಲ್ಲೆಯ ಗಡಿ ಪ್ರದೇಶದ ಚೆಕ್ ಪೋಸ್ಟ್ಗಳಲ್ಲಿ ಬಿಗಿಕ್ರಮ ಕೈಗೊಳ್ಳಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಹೇಳಿದರು.
ಹೆಚ್ಚಿನ ನಿಗಾ
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಮಾಹಿತಿ ನೀಡಿ, ೧೫ ವರ್ಷ ಮೇಲ್ಪಟ್ಟವರೆಲ್ಲರೂ ಲಸಿಕೆ ಪಡೆಯು ವಂತಾಗಲು ಪ್ರಯತ್ನಿಸಲಾಗುತ್ತಿದೆ. ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿ ತರಕಾರಿ, ಹಾಲು, ಹಣ್ಣು ಹಾಗೂ ದಿನಸಿ ಪದಾರ್ಥಗಳಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯ ಉಂಟಾಗದAತೆ ಗಮನಹರಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
ರೆಸಾರ್ಟ್ ಹಾಗೂ ಇತರ ಕಡೆಗಳಲ್ಲಿ ಕೋವಿಡ್-೧೯ ಪಾಸಿಟಿವಿಟಿ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸು ವಂತೆ ಮನವಿ ಮಾಡಲಾಗಿದೆ.
ಹೊರ ರಾಜ್ಯ ಹಾಗೂ ವಿದೇಶಗಳಿಂದ ಬರುವವರ ಬಗ್ಗೆ ಹೆಚ್ಚಿನ ನಿಗಾವಹಿಸಲಾಗಿದೆ. ಕುಟ್ಟ, ಮಾಕುಟ್ಟ ಗಡಿಭಾಗದ ಚೆಕ್ಪೋಸ್ಟ್ ಗಳಲ್ಲಿ ಬರುವವರು ೭೨ ಗಂಟೆ ಅವಧಿಯ ನೆಗಟಿವ್ ವರದಿ ನೀಡಬೇಕು ಎಂದರು.
ಶಾಲಾ-ಕಾಲೇಜುಗಳಲ್ಲಿ ೨ ಅಥವಾ ೩ ಪಾಸಿಟಿವಿಟಿ ಪ್ರಕರಣಗಳು ಕಂಡುಬAದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತದೆ. ಕೋವಿಡ್ ನಿರ್ವಹಣೆ ಸಂಬAಧಿಸಿದAತೆ ಹಣದ ಕೊರತೆ ಇಲ್ಲ.
ಎರಡನೇ ಡೋಸ್ ಪಡೆದು ಒಂಬತ್ತು ತಿಂಗಳು ಪೂರ್ಣಗೊಂಡ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಪ್ರತಿ ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ರ್ಯಾಂಡಮ್ ಆಗಿ ಪರಿಶೀಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಗ್ರಾ.ಪಂ.ಮಟ್ಟದಲ್ಲಿನ ಕಾರ್ಯಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊರೊನಾ ನಿಯಂತ್ರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಕ್ರಮವಹಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಕೋವಿಡ್ ನಿಯಂತ್ರಣ ಸಂಬAಧ ಸರ್ಕಾರದ ನಿಯಮದಂತೆ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಗಡಿ ಭಾಗದ ಚೆಕ್ಪೋಸ್ಟ್ಗಳಲ್ಲಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಅವರು ಕೋವಿಡ್ ನಿಯಂತ್ರಣ ಸಂಬAಧ ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿದೆ. ಔಷಧಿ ದಾಸ್ತಾನು ಇದ್ದು, ಲಸಿಕಾ ಕಾರ್ಯ ಕ್ರಮ ಪ್ರಗತಿ ಸಾಧಿಸಲಾಗುವುದು ಎಂದು ಮಾಹಿತಿ ನೀಡಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷಾö್ಮಣು ಜೀವಿ ವಿಭಾಗದಲ್ಲಿ ತಜ್ಞರ ಕೊರತೆ ಇದೆ ಎಂದು ಸಚಿವರ ಗಮನಕ್ಕೆ ತಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ ಅವರು ೧೫ ರಿಂದ ೧೮ ವರ್ಷದೊಳಗಿನ ೧೧,೬೦೦ ವಿದ್ಯಾರ್ಥಿಗಳಲ್ಲಿ ೧೦,೭೦೪ ವಿದ್ಯಾರ್ಥಿಗಳಿಗೆ ಲಸಿಕೆ ಪೂರ್ಣ ಗೊಂಡಿದೆ. ಉಳಿದಂತೆ ಲಸಿಕೆ ಪ್ರಗತಿ ಸಾಧಿಸಲಾಗುವುದು ಎಂದು ತಿಳಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು ಅವರು ಜಿಲ್ಲೆಯಲ್ಲಿ ೬೫ ಪದವಿಪೂರ್ವ ಕಾಲೇಜುಗಳಿದ್ದು, ೧೧,೧೬೭ ವಿದ್ಯಾರ್ಥಿ ಗಳಲ್ಲಿ ೧೦,೪೫೭ ವಿದ್ಯಾರ್ಥಿಗಳು ಲಸಿಕೆ ಪಡೆದಿದ್ದು, ಎರಡು-ಮೂರು ದಿನದಲ್ಲಿ ಲಸಿಕಾ ಪ್ರಗತಿ ಸಾಧಿಸಲಾಗುವುದು ಎಂದು ಹೇಳಿದರು.
೧೪೯೨ ಸಕ್ರಿಯ ಪ್ರಕರಣ
ಜಿಲ್ಲಾ ಲಸಿಕಾ ಅಧಿಕಾರಿ ಡಾ. ಗೋಪಿನಾಥ್ ಅವರು ಜಿಲ್ಲೆಯಲ್ಲಿ ೧,೪೯೨ ಸಕ್ರಿಯ ಪಾಸಿಟಿವ್ ಪ್ರಕರಣಗಳಿದ್ದು, ೧,೪೧೧ ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ೩೫ ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಆರೈಕೆ ಕೇಂದ್ರದಲ್ಲಿ ೪೬ ಮಂದಿ ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ, ಕೊಡಗು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ನೋಡಲ್ ಅಧಿಕಾರಿಗಳಾದ ಪಿ. ಶ್ರೀನಿವಾಸ್, ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ, ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್ ಇತರರು ಹಲವು ಮಾಹಿತಿ ನೀಡಿದರು.
ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿ
ವೀಡಿಯೋ ಸಂವಾದ ನಂತರ ನೋಡಲ್ ಅಧಿಕಾರಿಗಳ ಜೊತೆ ಚರ್ಚಿಸಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಕೋವಿಡ್ ಪ್ರಯೋಗಾಲಯಕ್ಕೆ ಹೆಚ್ಚಿನ ಆರೋಗ್ಯ ತಜ್ಞರು ಅಗತ್ಯವಿದ್ದಲ್ಲಿ ನಿಯೋಜಿಸಿ ಕೊಳ್ಳುವಂತೆ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಿಗೆ ಸೂಚಿಸಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಕ್ಷಾö್ಮಣು ಜೀವಿ ವಿಭಾಗದಲ್ಲಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು, ಹೋಂ ಐಸೋಲೇಷನ್ನಲ್ಲಿ ಇರುವವರಿಗೆ ವೈದ್ಯಕೀಯ ಕಿಟ್ ನೀಡುವುದರ ಜೊತೆಗೆ ಯಾವ ಯಾವ ವೇಳೆಯಲ್ಲಿ ಯಾವ ಯಾವ ಮಾತ್ರೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ವೀಡಿಯೋ ರೆಕಾರ್ಡ್ ಮೂಲಕ ಮಾಹಿತಿ ನೀಡವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸಲಹೆ ಮಾಡಿದರು.
ಕುಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲ ಸೌಲಭ್ಯ ಗಳನ್ನು ಕಲ್ಪಿಸಲು ಕ್ರಮವಹಿಸಬೇಕು. ಮುಂದಿನ ೩೦ ದಿನಗಳಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮುನ್ನೆಚ್ಚರ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಈ ಸಂಬAಧ ವೈದ್ಯಕೀಯ ಕಿಟ್ಗಳನ್ನು ಸಿದ್ಧಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ಕೋವಿಡ್ ಸಂದರ್ಭದಲ್ಲಿ ರ್ಯಾಲಿ, ಪ್ರತಿಭಟನೆ ನಿಷೇಧಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.