ಮಡಿಕೇರಿ, ಜ. ೨೦: ಜಿಲ್ಲೆಯಲ್ಲಿ ಗುರುವಾರ ೪೧೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೩೮, ವೀರಾಜಪೇಟೆ ತಾಲೂಕಿನಲ್ಲಿ ೮೪, ಸೋಮವಾರಪೇಟೆ ತಾಲೂಕಿನಲ್ಲಿ ೧೯೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೭,೬೭೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿ ಯಲ್ಲಿ ೧೧೯ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೫,೭೪೮ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೮ ಮರಣ ಪ್ರಕರಣಗಳು ವರದಿಯಾಗಿವೆ. ೧೪೯೨ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೮೭ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೯.೬೭ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.