ಕೊಡ್ಲಿಪೇಟೆ, ಜ. ೨೦: ಇಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುವ ವಿವಿಧ ಕಾಮಗಾರಿಗಳಿಗೆ ಗ್ರಾ.ಪಂ. ಅಧ್ಯಕ್ಷರು ಸೇರಿದಂತೆ ಸದಸ್ಯರುಗಳು ಭೂಮಿ ಪೂಜೆ ನೆರವೇರಿಸಿದರು.
ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೪.೫೦ ಲಕ್ಷ ಮೊತ್ತದ ಶೌಚಾಲಯ ನಿರ್ಮಾಣ ಹಾಗೂ ಗ್ರಾಮ ಪಂಚಾಯತ್ ಕಟ್ಟಡದ ಸುತ್ತ ೮.೫೦ ಲಕ್ಷದ ಉದ್ಯಾನವನ ಮತ್ತು ರಸ್ತೆ ನಿರ್ಮಾಣ, ೧೩.೫೦ ಲಕ್ಷ ವೆಚ್ಚದ ಸಂಜೀವಿನಿ ಮಹಿಳಾ ಸ್ವಸಹಾಯ ಒಕ್ಕೂಟದ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ಮಾತನಾಡಿದ ಗ್ರಾ.ಪಂ.ಅಧ್ಯಕ್ಷ ಕೆ.ಆರ್.ಚಂದ್ರಶೇಖರ್, ಎಲ್ಲಾ ಸದಸ್ಯರುಗಳ ಸಹಕಾರದೊಂದಿಗೆ ಉದ್ಯೋಗ ಖಾತ್ರಿ ಯೋಜನೆ ಮತ್ತು ಪಂಚಾಯತ್ ಅನುದಾನದಿಂದ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡಬೇಕಿದೆ ಎಂದರು.
ಈ ಸಂದರ್ಭ ಉಪಾಧ್ಯಕ್ಷೆ ಗೀತಾ ತ್ಯಾಗರಾಜ್ ಹಾಗೂ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ,ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ,ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.