ಮಡಿಕೇರಿ, ಜ. ೨೦: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಡಿಕೇರಿ ಎಎನ್‌ಎಂ ತರಬೇತಿ ಕೇಂದ್ರಗಳಲ್ಲಿ ೨೪ ತಿಂಗಳುಗಳ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿ ಆಕ್ಷೇಪಣೆಗಳಿದ್ದಲ್ಲಿ ತಾ. ೨೨ ರಂದು ಸಂಜೆ ೫ ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ತಿಳಿಸಿದ್ದಾರೆ.