*ಗೋಣಿಕೊಪ್ಪ, ಜ. ೨೦: ಉತ್ತಮ ಶಿಕ್ಷಣ ಪಡೆದುಕೊಂಡಾಗ ಮಾತ್ರ ದೇಶದ ಅತ್ಯುತ್ತಮ ಪ್ರಜೆಯಾಗಲು ಸಾಧ್ಯ. ದೇಶ ಸಂಮೃದ್ಧಿ ಹೊಂದಲು ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕೆAದು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದರು.

ಪೊನ್ನಂಪೇಟೆ ತಾಲೂಕಿನ ತಿತಿಮತಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ದೇಶದಲ್ಲಿ ನಡೆಯುವ ಪ್ರತಿಯೊಂದು ವಿದ್ಯಮಾನಗಳನ್ನು ಅರಿತುಕೊಳ್ಳುವುದು ಮತ್ತು ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ಮಾರ್ಗವೆಂದರೆ ಪ್ರತಿಯೊಬ್ಬನು ಪರಿಪೂರ್ಣ ಶಿಕ್ಷಣವನ್ನು ಹೊಂದಿಕೊಳ್ಳುವುದು. ಈ ನಿಟ್ಟಿನಲ್ಲಿ ಸರ್ಕಾರವು ಮಕ್ಕಳ ಶಿಕ್ಷಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಶಾಲಾ, ಕಾಲೇಜುಗಳಿಗೆ ಶಿಕ್ಷಣಕ್ಕೆ ಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅನುದಾನ ನೀಡುತ್ತಿದೆ ಎಂದು ಹೇಳಿದರು. ತಿತಿಮತಿ ಸರ್ಕಾರಿ ಪದವಿ ಕಾಲೇಜಿಗೆ ೭೮ ಲಕ್ಷದಲ್ಲಿ ಎರಡು ತರಗತಿಯ ಕೊಠಡಿ ಮತ್ತು ವಿದ್ಯಾರ್ಥಿನಿಯರಿಗೆ ಮತ್ತು ವಿದ್ಯಾರ್ಥಿಗೆ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಗೆ ಅನುದಾನವನ್ನು ನೀಡಲಾಗಿದೆ. ಎಂದು ಮಾಹಿತಿ ನೀಡಿದರು.

ತಾಲೂಕು ಬಗರ್‌ಹುಕುಂ ಜಾಗೃತಿ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ತಿತಿಮತಿ ಗ್ರಾ.ಪಂ. ಅಧ್ಯಕ್ಷೆ ಆಶಾ, ಉಪಾಧ್ಯಕ್ಷೆ ವಿಜಯ, ಸದಸ್ಯರಾದ ಎನ್.ಎನ್. ಅನೂಪ್ ಕುಮಾರ್, ಸುಬ್ರು, ಸರಸ್ವತಿ, ಪೊನ್ನಿ, ಶ್ಯಾಮಲ, ಶೇಖರ, ಶಂಕರ, ಅಪ್ರೋಸ್, ಪಿ.ಡಿ.ಓ ಮಮತಾ ಜಗದೀಶ್, ಬಿಜೆಪಿ ಜಿಲ್ಲಾ ಖಜಾಂಚಿ ಚೆಪುö್ಪಡೀರ ಮಾಚು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೆಪುö್ಪಡೀರ ರಾಮಕೃಷ್ಣ, ರೈತ ಮೋರ್ಚ ಸ್ಥಾನೀಯ ಸಮಿತಿ ಅಧ್ಯಕ್ಷ ಚೆಪುö್ಪಡೀರ ಕಾರ್ಯಪ್ಪ, ಪ್ರಾಂಶುಪಾಲ ಸರ್ವೋತ್ತಮ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸಣ್ಣುವಂಡ ನವೀನ್, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧುದೇವಯ್ಯ, ಆಪ್ತ ಸಹಾಯಕ ನರಸಿಂಹ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.