ಮಡಿಕೇರಿ, ಜ. ೨೧ : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಕ್ಕಂದೂರು, ಕೆ.ನಿಡುಗಣೆ, ಹೊದ್ದೂರು ಹಾಗೂ ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೧೩.೨೪ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಚಾಲನೆ ನೀಡಿದರು.

ಮಡಿಕೇರಿ ತಾಲೂಕಿನ ಮಕ್ಕಂದೂರು ಬಳಿ ಸೇತುವೆ, ಕಾಂಕ್ರೀಟ್ ರಸ್ತೆ ಉದ್ಘಾಟಿಸಿ, ಗ್ರಾಮೀಣ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಪ್ರೌಢಶಾಲಾ ಸಮೀಪದಲ್ಲಿ ನಿರ್ಮಿಸಲಾಗುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಕರ್ನಾಟಕ ಸರಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಗ್ರಾಮೀಣ ಮಟ್ಟದಲ್ಲಿ ಪಬ್ಲಿಕ್ ಶಾಲೆಯನ್ನು ತೆರೆÀದು ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣವನ್ನು ನೀಡಲು ಗುರಿ ಹೊಂದಲಾಗಿದೆ. ಇದರ ಪ್ರಯೋಜನವನ್ನು ಗ್ರಾಮೀಣ ಭಾಗದ ಮಕ್ಕಳು ಪಡೆದುಕೊಳ್ಳುವಂತೆ ಕರೆ ನೀಡಿದರು. ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ ಅವರು, ಸಾರ್ವಜನಿಕರು ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು. ಏನೇ ವ್ಯತ್ಯಾಸ ಕಂಡು ಬಂದರು ಅಧಿಕಾರಿಗಳಿಗೆ ಅಥವಾ ತನÀಗೆ ತಿಳಿಸಿ.

ಈ ಸಂದರ್ಭ ಬಿ.ಜೆ.ಪಿ. ಮುಖಂಡರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಕೇಟೋಳಿರ ಹರೀಶ್ ಪೂವಯ್ಯ, ಶಿವಾಚಾಳಿಯಂಡ ಅಂಬಿ ಕಾರ್ಯಪ್ಪ, ಶಿವಾಚಾಳಿಯಂಡ ಜಗದೀಶ್, ಕುಂಡ್ಯೋಳAಡ ರಮೇಶ್ ಮುದ್ದಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎಸ್. ಪಾರ್ವತಿ, ಸದಸ್ಯರಾದ ಹೇಮಾ, ನೀಲಮ್ಮ, ಕುಶು ಕುಶಾಲಪ್ಪ, ಜಿನ್ನು ನಾಣಯ್ಯ, ಕಂಗಾAಡ ಜಾಲಿ ಪೂವಪ್ಪ, ಪಬ್ಲಿಕ್ ಶಾಲೆಯ ಅಧ್ಯಕ್ಷ ಕೆ.ಎ. ಹ್ಯಾರೀಸ್, ಪ್ರಾಂಶುಪಾಲೆ ಡಾ. ಅವನಿಜ ಸೋಮಯ್ಯ, ಶಾಲೆಯ ಉಪ ಪ್ರಾಂಶುಪಾಲೆ ಸೌಭಾಗ್ಯ, ಸಿಬ್ಬಂದಿ, ಶಾಲೆಯ ಸ್ಥಳ ದಾನಿಗಳು, ಲೋಕೋಪಯೋಗಿ ಇಲಾಖೆ ಅಭಿಯಂತರ ಸತೀಶ್, ಗ್ರಾಮಸ್ಥರು ಮತ್ತಿತರರು ಇದ್ದರು.