ಕೂಡಿಗೆ, ಜ. ೨೦: ಬಡವರ ಮನೆಗಳಿಗೆ ವಿದ್ಯುತ್ ನೀಡುವ ಬೆಳಕು ಯೋಜನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಬೆಂಡೆಬೆಟ್ಟ ಮತ್ತು ಹಾರಂಗಿ ಗ್ರಾಮದಲ್ಲಿನ ವಿದ್ಯುತ್ ಸೌಲಭ್ಯ ವಿಲ್ಲದೆ ಬಡತನ ರೇಖೆಯಲ್ಲಿದ್ದ ಬಡವರಿಗೆ ರಾಜ್ಯ ಸರ್ಕಾರದ ಹೊಸ ಯೋಜನೆಯಾದ ಬೆಳಕು ಯೋಜನೆಯ ಅಡಿಯಲ್ಲಿನ ಮನೆಗಳಿಗೆ ವಿದ್ಯುತ್ ಸೌಲಭ್ಯ ನೀಡಲಾಯಿತು. ಕೇಂದ್ರ ಸರಕಾರದ ಸೌಭಾಗ್ಯ ಯೋಜನೆ ಅಡಿಯಲ್ಲಿ ಈಗಾಗಲೇ ವಿದ್ಯುತ್ ವ್ಯವಸ್ಥೆಯನ್ನು ಮಾಡಲಾಗಿದೆ. ಸರಕಾರದ ವಿವಿಧ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕರು ಸಾರ್ವಜನಿಕರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಚೆಸ್ಕಾಂನ ಕಾರ್ಯಪಾಲಕ ಅಭಿಯಂತರ ಅಶೋಕ್ ಯೋಜನೆಯ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ ೪೭೧ ಮನೆಗಳಿಗೆ ಉಚಿತವಾಗಿ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಇನ್ನೂ ೨೦೮ ನೋಂದಾಯಿತ ಫಲಾನುಭವಿಗಳು ಇದ್ದಾರೆ. ಅವರಿಗೂ ನೀಡಲಾಗುವುದು. ಇದರ ಜೊತೆಯಲ್ಲಿ ಆಯಾ ಗ್ರಾಮದಲ್ಲಿ ವಿದ್ಯುತ್ ಸೌಲಭ್ಯ ಇಲ್ಲದವರು ಸಮೀಪದ ಚೆÀಸ್ಕಾಂ ವಿದ್ಯುತ್ ಕೇಂದ್ರದಲ್ಲಿ ತಾ.೩೦ರೊಳಗೆ ನೋಂದಾಯಿಸಿಕೊಳ್ಳಲು ಮನವಿ ಮಾಡಿದರು.
ಈ ಸಂದರ್ಭ ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಬಾಸ್ಕರ್ ನಾಯಕ್, ಸದಸ್ಯರಾದ ಕೆ.ಕೆ. ಭೋಗಪ್ಪ ದಿನೇಶ್, ಗಿರೀಶ್, ಮಣಿ, ಚೈತ್ರ, ದೀಪಾಲಕ್ಷಿö್ಮ, ಜಿಲ್ಲಾ ಎಸ್.ಟಿ. ಮೋರ್ಚಾದ ಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಎಸ್.ಸಿ. ಮೋರ್ಚಾದ ಉಪಾಧ್ಯಕ್ಷ ಕುಮಾರ್ ಸ್ವಾಮಿ, ತಾಲೂಕು ಮಾಜಿ ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಾಂಚೀರ ಮನು ನಂಜುAಡ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಮಂಜುನಾಥ, ಪ್ರವೀಣ್, ಕಾರ್ಯಪಾಲಕ ಅಭಿಯಂತರ ಅಶೋಕ, ಕಿರಿಯ ಇಂಜಿನಿಯರ್ ರಾಣಿ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.