ಮಡಿಕೇರಿ, ಜ. ೨೦: ಕೋವಿಡ್-೧೯ ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆ ಎಲ್ಲಾ ಸಂಘ-ಸAಸ್ಥೆಗಳ ಚುನಾವಣೆ, ಉಪ ಚುನಾವಣೆಗಳನ್ನು ಮಾರ್ಚ್ ಅಂತ್ಯದವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಹಕಾರ ಇಲಾಖೆಯ ಜಂಟಿ ಕಾರ್ಯದರ್ಶಿ ಎಂ. ವೆಂಕಟಸ್ವಾಮಿ ತಿಳಿಸಿದ್ದಾರೆ. ಈಗಾಗಲೇ ಚುನಾವಣಾ ಪ್ರಕ್ರಿಯೆಗಳನ್ನು ಪ್ರಾರಂಭಿಸಿರುವ ಪ್ರಕರಣಗಳಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.