ಮಡಿಕೇರಿ, ಜ. ೨೧: ಜಿಲ್ಲೆಯಲ್ಲಿ ಶುಕ್ರವಾರ ೩೨೭ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೪೬, ವೀರಾಜಪೇಟೆ ತಾಲೂಕಿನಲ್ಲಿ ೧೧೦, ಸೋಮವಾರಪೇಟೆ ತಾಲೂಕಿನಲ್ಲಿ ೭೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೮,೦೦೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೨೧ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೫,೯೬೯ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೮ ಮರಣ ಪ್ರಕರಣಗಳು ವರದಿಯಾಗಿವೆ. ೧೫೯೮ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್ಮೆAಟ್ ವಲಯಗಳ ಸಂಖ್ಯೆ ೨೦೩ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೧೦.೦೧ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.