ವೀರಾಜಪೇಟೆ, ಜ. ೨೧: ಕೀರೆ ಹೊಳೆಯ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮತ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿರುವ ಘಟನೆ ವೀರಾಜಪೇಟೆ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ.
ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಬೋಯಿಕೇರಿ ಮತ್ತು ಕೊಟ್ಟೋಳಿ ಗ್ರಾಮಗಳ ಮಧ್ಯೆ ಸಾಗುವ ಕಿರುಹೊಳೆಯ ಪಾತ್ರದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಬಂದ ಹಿನೆÀ್ನಲೆಯಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮುಂಜಾನೆಯ ಮೂರು ಗಂಟೆಯ ವೇಳೆಯಲ್ಲಿ ದಾಳಿ ನಡೆಸಿದ್ದಾರೆ. ಪೊಲೀಸರು ಬರುತ್ತಿರುವುದು ತಿಳಿದು ವಾಹನ ಚಾಲಕ ಹಾಗೂ ಇತರರು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಕೃತ್ಯಕ್ಕೆ ಬಳಸಿದ ಪಿಕ್ ಅಪ್ ವಾಹನ ಸೇರಿದಂತೆ ವಾಹನದಲ್ಲಿ ಸಾಗಾಟ ಮಾಡಲು ತುಂಬಿಸಿದ್ದ ಮರಳು ವಶಕ್ಕೆ ಪಡೆದಿದ್ದಾರೆ. ವಾಹನ ಚಾಲಕನ ಮೇಲೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ವೀರಾಜಪೇಟೆ ಉಪವಿಭಾಗ ಡಿವೈಎಸ್ಪಿ ಸಿ.ಟಿ. ಜಯಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರಾದ ಬಿ.ಎಸ್.ಶ್ರೀಧರ್ ಅವರ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ಪಿ.ಎಸ್.ಐ. ಸಿ. ಶ್ರೀಧರ್, ಪಿ.ಎಸ್.ಐ ಸಿದ್ಧಲಿಂಗ ಬಿ. ಬಾಣಸೆ ಮತ್ತು ಸಿಬ್ಬಂದಿಗಳಾದ ಚಂದ್ರಶೇಖರ್ ಮತ್ತು ಶ್ರೀಕಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
-ಕೆ.ಕೆ.ಎಸ್