ಮಡಿಕೇರಿ, ಜ. ೨೨: ಕಳೆದ ಹತ್ತು ವರ್ಷಗಳಿಂದ ಪ್ರತೀ ವರ್ಷವೂ ಸಿದ್ಧಗಂಗಾ ಶ್ರೀಗಳ ಹುಟ್ಟುಹಬ್ಬ ಕಾರ್ಯಕ್ರಮವನ್ನು ಎಲ್ಲಾ ಜಾತಿ ಧರ್ಮೀಯರನ್ನು ಸೇರಿಸಿಕೊಂಡು ವಿವಿಧ ಗ್ರಾಮಗಳಲ್ಲಿ ಆಚರಿಸಿಕೊಂಡು ಬರುತ್ತಿರುವ ಹಾಗೂ ಕಳೆದ ಮೂರು ವರ್ಷಗಳಿಂದ ಶ್ರೀಗಳ ಪುಣ್ಯಸ್ಮರಣೆಯನ್ನು ನಡೆಸಿಕೊಂಡು ಬರುತ್ತಿರುವ ಸಿದ್ಧಗಂಗಾ ಶ್ರೀ ಭಕ್ತ ಮಂಡಳಿ ಅಧ್ಯಕ್ಷ ಕೆ.ಎಸ್.ಮೂರ್ತಿ ಅವರನ್ನು ಕುಶಾಲನಗರದ ವಿವೇಕಾನಂದ ಪಿಯು ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ, ಕಾಲೇಜಿನ ಮೇನೇಜಿಂಗ್ ಟ್ರಸ್ಟಿ ಶಂಭುಲಿAಗಪ್ಪ, ಪ್ರಾಂಶುಪಾಲರಾದ ಲಿಖಿತ, ಕ್ಲಾರಾ ರೇಷ್ಮಾ ಇದ್ದರು.