ಇಂಡಿಯಾ ಗೇಟ್‌ನಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ

ನವದೆಹಲಿ, ಜ. ೨೧: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ. ಇನೂ ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿಯನ್ನು ರಾಷ್ಟಿçÃಯ ಯುದ್ಧ ಸ್ಮಾರಕದ ಜ್ವಾಲೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಇಡೀ ರಾಷ್ಟçವೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮದಿನಾಚರಣೆಯನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಇಂಡಿಯಾ ಗೇಟ್‌ನಲ್ಲಿ ನೇತಾಜಿಯವರ ಭವ್ಯವಾದ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಇದು ಅವರಿಗೆ ಭಾರತದ ಕೃತಜ್ಞತೆಯ ಸಂಕೇತವಾಗಿದೆ. ಜನವರಿ ೨೩ ರಂದು ನೇತಾಜಿ ಅವರ ಜನ್ಮದಿನದಂದು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ೧೯೭೨ರಲ್ಲಿ ಇಂಡಿಯಾ ಗೇಟ್‌ನಲ್ಲಿ ನಿರ್ಮಿಸಲಾದ ಅಮರ್ ಜವಾನ್ ಜ್ಯೋತಿಯನ್ನು ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿದ್ದು, ಅದನ್ನು ರಾಷ್ಟಿçÃಯ ಯುದ್ಧ ಸ್ಮಾರಕದಲ್ಲಿ ವಿಲೀನಗೊಳಿಸುತ್ತಿದೆ. ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿ ಗಣರಾಜ್ಯೋತ್ಸವದ ಮೊದಲು ಯುದ್ಧ ಸ್ಮಾರಕದಲ್ಲಿ ಪ್ರಜ್ವಲಿಸಲಿದೆ. ಅಮರ್ ಜವಾನ್ ಜ್ಯೋತಿಯನ್ನು ರಾಷ್ಟಿçÃಯ ಯುದ್ಧ ಸ್ಮಾರಕದಲ್ಲಿ ವಿಲೀನಗೊಳಿಸುವ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ನಮ್ಮ ವೀರ ಸೈನಿಕರ ಸ್ಮರಣೆಗಾಗಿ ಇರುವ ಅಮರ ಜ್ಯೋತಿಯನ್ನು ಇಂದು ನಂದಿಸುವುದು ತುಂಬಾ ದುಃಖಕರವಾಗಿದೆ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ, ಸಮಸ್ಯೆ ಇಲ್ಲ. ನಮ್ಮ ಸೈನಿಕರಿಗಾಗಿ ಮತ್ತೊಮ್ಮೆ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ ಎಂದು ರಾಹುಲ್ ಟ್ವೀಟ್‌ನಲ್ಲಿ ಕೇಂದ್ರ ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್

ಪಣಜಿ, ಜ. ೨೧: ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ ಹಿನ್ನೆಲೆ ಗೋವಾ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಶುಕ್ರವಾರ ಬಿಜೆಪಿ ತೊರೆದಿದ್ದಾರೆ. ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿಯಿಂದಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಉತ್ಪಲ್ ಪರಿಕ್ಕರ್ ಅವರು ಘೋಷಿಸಿದ್ದಾರೆ. ನನಗೆ ಬೇರೆ ಆಯ್ಕೆಯಿಲ್ಲ. ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ನಾನು ಪಣಜಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಉತ್ಪಲ್ ಪರಿಕ್ಕರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಜೀನಾಮೆ ಔಪಚಾರಿಕವಾಗಿದೆ. ಆದರೆ ಬಿಜೆಪಿ ಯಾವಾಗಲೂ ನನ್ನ ಹೃದಯದಲ್ಲಿರುತ್ತದೆ. ಇದು ನನಗೆ ಕಷ್ಟದ ಆಯ್ಕೆ, ಗೋವಾದ ಜನರಿಗಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ, ನನ್ನ ರಾಜಕೀಯ ಭವಿಷ್ಯದ ಬಗ್ಗೆ ಯಾರೂ ಚಿಂತಿಸಬೇಡಿ, ಗೋವಾದ ಜನ ಅದನ್ನು ನಿರ್ಧರಿಸುತ್ತಾರೆ ಎಂದು ಅವರು ಹೇಳಿದ್ದಾರೆ.