ಸೋಮವಾರಪೇಟೆ, ಜ. ೨೨: ವಿದ್ಯಾರ್ಥಿಗಳು ಸೇವಾ ಮನೋಭಾವ ಹಾಗೂ ಶಿಸ್ತನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬಹುದು ಎಂದು ಮಾಜಿ ಸೈನಿಕ ಹಾಗೂ ತರಬೇತುದಾರರಾದ ಚಂದ್ರಕುಮಾರ್ ಅಭಿಪ್ರಾಯಿಸಿದರು.
ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಹಾಗೂ ಯೂತ್ ರೆಡ್ ಕ್ರಾಸ್ ಘಟಕಗಳ ವತಿಯಿಂದ ೨೦೨೧-೨೨ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಲವಲವಿಕೆಯಿಂದ ತೊಡಗಿಸಿಕೊಂಡರೆ ಮಾತ್ರ ದೈಹಿಕ ಹಾಗೂ ಮಾನಸಿಕವಾಗಿ ಸಧೃಢರಾಗಲು ಸಾಧ್ಯವೆಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸಂತ ಜೋಸೆಫರ ವಿದ್ಯಾಸಂಸ್ಥೆಗಳ ಸಂಚಾಲಕರಾದ ಎಂ. ರಾಯಪ್ಪ ಅವರು ಘಟಕಗಳ ಸ್ವಯಂಸೇವಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪಿ.ಜೆ. ಜಸ್ಟಿನ್ ಸ್ವಯಂಸೇವಕರಿಗೆ ಬ್ಯಾಡ್ಜ್ಗಳನ್ನು ತೊಡಿಸಿದರು. ರಾಷ್ಟಿçÃಯ ಸೇವಾ ಯೋಜನೆ ಅಧಿಕಾರಿಗಳಾದ ಆನಂದ್, ಯೂತ್ ರೆಡ್ಕ್ರಾಸ್ ಘಟಕದ ಬಿ.ಆರ್.ಹರೀಶ್, ಸಹ ಅಧಿಕಾರಿಗಳಾದ ವಿಂದ್ಯಾ, ಶಿವಕುಮಾರ್, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.