ಮಡಿಕೇರಿ, ಜ. ೨೨: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿ ಇಲ್ಲಿನ ರಾಷ್ಟಿçÃಯ ಸೇವಾ ಯೋಜನೆ ಘಟಕ, ರೆಡ್‌ಕ್ರಾಸ್ ಘಟಕ ಹಾಗೂ ರೆಡ್‌ಂಬ್ಬನ್ ವತಿಯಿಂದ ರಾಷ್ಟಿçÃಯ ಯುವ ದಿನಾಚರಣೆ ಹಾಗೂ ಯುವ ಸಪ್ತಾಹ ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು ನಲವತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ರವೀಂದ್ರ ರೈ ಅವರು ವಿಜ್ಞಾನ ಇಂದು ಇಷ್ಟು ಮುಂದುವರಿದರೂ ಕೃತಕ ರಕ್ತವನ್ನು ಕಂಡು ಹಿಡಿಯಲು ಆಗಲಿಲ್ಲ. ಹಾಗಾಗಿ ನಾವೇ ನಮ್ಮ ರಕ್ತವನ್ನು ದಾನ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಮಾನವೀಯ ತತ್ವಗಳನ್ನು ಪಸರಿಸುವ ಉದ್ದೇಶದಿಂದ ರೆಡ್‌ಕ್ರಾಸ್ ಸಂಸ್ಥೆ ರಕ್ತದಾನ ಶಿಬಿರಗಳನ್ನು ಏರ್ಪಡಿಸುತ್ತಾ ಬಂದಿದೆ. ಯಾರಿಗೆ ರಕ್ತದ ಕೊರತೆ ಎದುರಾದರೂ ಅವರಿಗೆ ರಕ್ತವನ್ನು ಒದಗಿಸುವ ಸಲುವಾಗಿ ಯುವ ಸಮುದಾಯ ಮುಂದಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಪ್ರಾಂಶುಪಾಲೆ ಚಿತ್ರ ಮಾತನಾಡಿ ಇದೊಂದು ಉತ್ತಮ ಕಾರ್ಯಕ್ರಮವಾಗಿದೆ. ರಕ್ತದಾನ ಎಲ್ಲಕ್ಕೂ ಮಿಗಿಲಾದ ದಾನವಾಗಿದೆ. ರಕ್ತದಾನ ಮಾಡುವುದರಿಂದ ಜನ್ಮಸಾರ್ಥಕ ಆಗುತ್ತದೆ. ಇದೊಂದು ಆರೋಗ್ಯಕ್ಕೆ ಉತ್ತಮವಾದ ವ್ಯವಸ್ಥೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ರೆಡ್‌ಕ್ರಾಸಿನ ಧನಂಜಯ್, ವೈದ್ಯಕೀಯ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳು, ಕಾಲೇಜಿನ ಪ್ರಾಧ್ಯಾಪಕ ಶಶಿಧರ್ ಬಿ.ಆರ್. ಮತ್ತು ಉಪನ್ಯಾಸಕ ವೃಂದದವರು ಹಾಜರಿದ್ದರು.