ಗೋಣಿಕೊಪ್ಪಲು, ಜ.೨೧: ಮನೆಯ ಹಿಂಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ನಡೆಸಿದ ಘಟನೆ ಗೋಣಿಕೊಪ್ಪ ಸಮೀಪದ ಕಳತ್ಮಾಡು ಬಳಿ ನಡೆದಿದೆ.

ಕಾಡಾನೆಯ ದಾಳಿ ಪರಿಣಾಮ ವ್ಯಕ್ತಿ ಹೊಸೊಕ್ಲು ಮಾಚಯ್ಯ (೭೨) ಅವರ ಎಡಗಾಲು ಸಂಪೂರ್ಣ ಮುರಿದಿದ್ದು, ಎದೆಯ ಭಾಗಕ್ಕೆ ಹಾಗೂ ಬಲಗಾಲಿಗೂ ಪೆಟ್ಟು ಬಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ವಿಷಯ ತಿಳಿದ ಸ್ಥಳೀಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೊಲ್ಲಿರ ಧನು ಪೂಣಚ್ಚ ಹಾಗೂ ಸದಸ್ಯ ವಿ.ವಿ.ಪ್ರಕಾಶ್ ಗ್ರಾಮಸ್ಥರೊಂದಿಗೆ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಯಿತು.

ಸುದ್ದಿ ತಿಳಿದ ಅರಣ್ಯ ಇಲಾಖೆಯ ಪೊನ್ನಂಪೇಟೆ ವಲಯ ಅರಣ್ಯಾಧಿಕಾರಿಗಳಾದ ರಾಜಪ್ಪ ಹಾಗೂ ಸಿಬ್ಬಂದಿಗಳಾದ ದಿವಾಕರ್ ತೆರಳಿ ಆರೋಗ್ಯ ವಿಚಾರಿಸಿದರು.

ಇಲಾಖೆಯ ವತಿಯಿಂದ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುವುದಾಗಿ ಸಂಬAಧಿಕರಿಗೆ ಭರವಸೆ ನೀಡಿದರು.

ಈ ಭಾಗದಲ್ಲಿ ನಿರಂತರ ಕಾಡಾನೆಗಳ ಉಪಟಳವಿದ್ದು, ನಾಗರಿಕರು ಪ್ರತಿನಿತ್ಯ ಪ್ರಾಣ ಭಯದಲ್ಲಿ ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಗಳನ್ನು ಸೆರೆಹಿಡಿಯಲು ಕ್ರಮ ಕೈಗೊಳ್ಳಲು ಪಂಚಾಯಿತಿ ಉಪಾಧ್ಯಕ್ಷರಾದ ಕೊಲ್ಲಿರ ಧನು ಪೂಣಚ್ಚ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ. ತಪ್ಪಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆÀ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ